newsics.com
ಬೆಂಗಳೂರು : ಕೊಲೆ ಆರೋಪದಲ್ಲಿ ಜೈಲು ಸೇರಿದ್ದ ನಟ ದರ್ಶನ್ ಇಂದು ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ನಟ ದರ್ಶನ್ಗೆ ಮಧ್ಯಂತರ ಜಾಮೀನು ಸಿಕ್ಕಿದೆ ಅಂತ ವಿಚಾರ ತಿಳಿದು ಸ್ಯಾಂಡಲ್ವುಡ್ ನಟ ನಟಿಯರು ಫುಲ್ ಖುಷ್ ಆಗಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಗೂ ಸ್ಟೋರಿ ಶೇರ್ ಮಾಡಿಕೊಳ್ಳುವ ಮೂಲಕ ಹರ್ಷ ವ್ಯಕ್ತಪಡಿಸುತ್ತಿದ್ದಾರೆ.
ರಕ್ಷಿತಾ ಪ್ರೇಮ್ ಕೂಡ ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಅವರ ಫೋಟೋ ಹಾಕಿ ಇಂದು ತುಂಬಾ ಖುಷಿಯಾದ ದಿನ ಅಂತ ಬರೆದುಕೊಂಡಿದ್ದಾರೆ.
ರಚಿತಾ ರಾಮ್ ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋವೊಂದನ್ನು ಶೇರ್ ಮಾಡಿಕೊಂಡಿದ್ದಾರೆ. ಶೇರ್ ಮಾಡಿಕೊಂಡ ವಿಡಿಯೋದಲ್ಲಿ ಕಾಲಾಯ ತಸ್ಮೈ ನಮಃ ಅಂತ ಹೇಳಿದ್ದಾರೆ.
