newsics.com
ಭೋಪಾಲ್: ಮಧ್ಯಪ್ರದೇಶದ ಬಾಂಧವಗಢ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಏಳು ಆನೆಗಳು ಸಾವನ್ನಪ್ಪಿದ್ದು, ಮೂರು ಆನೆಗಳು ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿವೆ ಎಂದು ವನ್ಯಜೀವಿ ಅಧಿಕಾರಿಗಳು ತಿಳಿಸಿದ್ದಾರೆ.
ಏಳು ಆನೆಗಳ ದಿಢೀರ್ ಸಾವಿಗೆ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ಜಬಲ್‌ಪುರದ ವನ್ಯಜೀವಿ ವಿಧಿವಿಜ್ಞಾನ ಪ್ರಯೋಗಾಲಯ ಮತ್ತು ಆರೋಗ್ಯ ಕೇಂದ್ರದಲ್ಲಿ ಏಳು ಆನೆಗಳ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ.
ರೈತರು ತಮ್ಮ ಬೆಳೆಗಳಿಗೆ ಕೀಟನಾಶಕ ಸಿಂಪಡಿಸಿದ್ದು, ಅದನ್ನು ತಿಂದ ಪರಿಣಾಮ ಆನೆಗಳು ಸಾವನ್ನಪ್ಪಿರುವ ಸಾಧ್ಯತೆ ಇರಬಹುದು ಎಂದು ಅರಣ್ಯಾಧಿಕಾರಿಗಳು ಶಂಕಿಸಿದ್ದಾರೆ.