newsics.com
ಕೊಲೆ ಕೇಸ್ ನಲ್ಲಿ ಅರೆಸ್ಟ್ ಆಗಿದ್ದ ನಟ ದರ್ಶನ್ ಗೆ ಹೈಕೋರ್ಟ್ 6 ವಾರಗಳ ಮಧ್ಯಂತರ ಜಾಮೀನು ನೀಡಿದೆ.
ಈ ಅವಧಿಯನ್ನು ಅವರು ಚಿಕಿತ್ಸೆಗೆ ಮಾತ್ರ ಬಳಕೆ ಮಾಡಿಕೊಳ್ಳಬೇಕಿದೆ. ಹೀಗಿರುವಾಗಲೇ ದರ್ಶನ್ ಗೆ ಶೀಘ್ರವೇ ಬಿಗ್ ಶಾಕ್ ನೀಡಲು ಪೊಲೀಸರು ನಿರ್ಧರಿಸಿದ್ದಾರೆ.
ಹೈಕೋರ್ಟ್ನ ಆದೇಶದ ಪೂರ್ಣ ಪ್ರತಿ ಇನ್ನೂ ಪೊಲೀಸರ ಕೈ ಸೇರಿಲ್ಲ. ಇದಕ್ಕಾಗಿ ಪೊಲೀಸರು ಕಾಯುತ್ತಿದ್ದಾರೆ. ಅಕ್ಟೋಬರ್ 30ರ ಸಂಜೆ ಹಿರಿಯ ಪೊಲೀಸ್ ಅಧಿಕಾರಿಗಳು ತನಿಖಾ ತಂಡದ ಜೊತೆ ಮಹತ್ವದ ಸಭೆ ನಡೆಸಿದ್ದಾರೆ ಎನ್ನಲಾಗಿದೆ.
ಈಗ ಹೈಕೋರ್ಟ್ ನೀಡಿರುವ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸುವ ಕುರಿತು ಚರ್ಚೆ ನಡೆದಿದೆ ಎನ್ನಲಾಗಿದೆ.
ಸದ್ಯ ದೀಪಾವಳಿ ಪ್ರಯುಕ್ತ ಸಾಲು ಸಾಲು ರಜೆಗಳು ಇವೆ. ಹೀಗಾಗಿ, ಕಾನೂನು ತಜ್ಞರ ಅಭಿಪ್ರಾಯ ಪಡೆದು ಮುಂದಿನ ನಿರ್ಧಾರ ತೆಗೆದುಕೊಳ್ಳಲು ಪೊಲೀಸರು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಸೋಮವಾರ ಮತ್ತೊಂದು ಸುತ್ತಿನ ಮಾತುಕತೆ ನಡೆಸಲು ಚಿಂತಿಸಲಾಗಿದೆ ಎನ್ನಲಾಗುತ್ತಿದೆ.