newsics.com
ಬೆಂಗಳೂರು: ಹಣ ಡಬಲ್ ಮಾಡಿಕೊಳ್ಳುವ ಆಸೆಗೆ ಬಿದ್ದು ಖಾಸಗಿ ಕಂಪನಿಯ ಲೆಕ್ಕಧಿಕಾರಿಯೊಬ್ಬರು ಬರೋಬ್ಬರಿ 4.5 ಕೋಟಿ ಕಳೆದುಕೊಂಡ ಘಟನೆ ಬೆಂಗಳೂರಿನ ಉತ್ತರಹಳ್ಳಿಯಲ್ಲಿ ನಡೆದಿದೆ.
ಬೆಂಗಳೂರಿನ ಉತ್ತರಹಳ್ಳಿಯ ಪೂರ್ಣಪ್ರಜ್ಞಾ ಲೇಔಟ್ ನಿವಾಸಿ ಕೆ.ಎಂ.ಮಧುಕುಮಾರ್ ವಂಚನೆಗೆ ಒಳಗಾಗಿದ್ದು, ಇವರು ನೀಡಿದ ದೂರಿನ ಮೇರೆಗೆ ಅಪರಿಚಿತರ ವಿರುದ್ಧ ದಕ್ಷಿಣ ವಿಭಾಗದ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆಲ ದಿನಗಳ ಹಿಂದೆ ಸಂಜೀವ್ ಸಿಂಗ್ ಎಂಬಾತ ಪರಿಚಯ ಮಾಡಿಕೊಂಡು ಮಧುಗೆ ವಂಚಿಸಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.