newsics.com
ಹಾಸನ : ಹಾಸನಾಂಬೆ ದರ್ಶನಕ್ಕೆ ಬಿಟ್ಟಿದ್ದ 300 ವಿಶೇಷ ಬಸ್ ಸಂಚಾರವನ್ನು ಸರ್ಕಾರ ರದ್ದು ಮಾಡಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಸಾವಿರಾರು ರೂ. ವಿಶೇಷ ದರ್ಶನದ ಟಿಕೆಟ್ ಪಡೆದು ಐದು ಗಂಟೆ ಕಾದರೂ ಹಾಸನಾಂಬೆ ದರ್ಶನ ಸಿಗಲಿಲ್ಲ. ಸರಿಯಾದ ವ್ಯವಸ್ಥೆ ಮಾಡಿಲ್ಲ ಎಂದು ಕೆನಡಾದಿಂದ ಬಂದಿರುವ ಹಾಸನಾಂಬೆ ಭಕ್ತೆ ರೋಷಿಣಿ ಅಸಮಾಧಾನ ಹೊರಹಾಕಿದ್ದಾರೆ.
ವಿವಿಧೆಡೆಯಿಂದ ವಿಶೇಷ ಬಸ್ ಸೌಲಭ್ಯ ಕಲ್ಪಿಸಲಾಗಿತ್ತು. ಆದರೆ, ಭಕ್ತರ ಸಂಖ್ಯೆ ಮಿತಿಮೀರಿದ್ದು ನಿಯಂತ್ರಣ ಕಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಕಲ್ಪಿಸಿದ್ದ 300 ಕ್ಕೂ ಹೆಚ್ಚು ವಿಶೇಷ ಬಸ್ ಸಂಚಾರವನ್ನು ರದ್ದು ಮಾಡಲಾಗಿದೆ.