Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ‘ಶಕ್ತಿ’ ಯೋಜನೆ ಮರುಪರಿಶೀಲನೆ ಹೇಳಿಕೆ: ಡಿಸಿಎಂ ಡಿಕೆಶಿಗೆ ವೇದಿಕೆಯಲ್ಲೇ ಖರ್ಗೆ ತರಾಟೆ
ಕರ್ನಾಟಕಪ್ರಮುಖ

‘ಶಕ್ತಿ’ ಯೋಜನೆ ಮರುಪರಿಶೀಲನೆ ಹೇಳಿಕೆ: ಡಿಸಿಎಂ ಡಿಕೆಶಿಗೆ ವೇದಿಕೆಯಲ್ಲೇ ಖರ್ಗೆ ತರಾಟೆ

Share
1 Min Read
SHARE

newsics.com

ಬೆಂಗಳೂರು: ರಾಜ್ಯ ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ‘ಶಕ್ತಿ’ ಯೋಜನೆಯನ್ನು ಮರು ಪರಿಶೀಲಿಸುವುದಾಗಿ ಹೇಳಿದ್ದ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಗುರುವಾರ ತರಾಟೆಗೆ ತೆಗೆದುಕೊಂಡರು.

ಆರ್ಥಿಕವಾಗಿ ಸದೃಢವಾಗಿರುವವರು, ಐಟಿಬಿಟಿ ಸಂಸ್ಥೆಯವರು, ಎಂಎನ್ ಸಿ ಕಂಪನಿಗಳ ಸಿಬ್ಬಂದಿ ಸೇರಿದಂತೆ ಅನೇಕ ಮಹಿಳೆಯರು ತಮಗೆ ಬಸ್ ಗಳಲ್ಲಿ ಉಚಿತ ಪ್ರಯಾಣದ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ಪರಿಶೀಲಿಸುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದರು.

ಡಿಕೆ ಶಿವಕುಮಾರ್ ಅವರ ಈ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದ್ದು, ಡಿಸಿಎಂ ಹೇಳಿಕೆ ವಿರೋಧ ಪಕ್ಷಗಳ ಬಾಯಿಗೆ ಆಹಾರವಾಗಿದೆ. ಉಪ ಚುನಾವಣೆಯಲ್ಲೂ ಕಾಂಗ್ರೆಸ್ ಮೇಲೆ ದುಷ್ಪರಿಣಾಮ ಬೀರಬಹುದು ಎಂದು ಹೇಳಲಾಗುತ್ತಿದೆ.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಸರ್ದಾರ್ ವಲ್ಲಭಬಾಯಿ ಪಟೇಲ್ ಜನ್ಮದಿನಾಚರಣೆ ಕಾರ್ಯಕ್ರಮದ ವೇದಿಕೆಯಲ್ಲಿ ಶಕ್ತಿ ಯೋಜನೆ ಪರಿಷ್ಕರಣೆ ಬಗ್ಗೆ ಡಿಕೆ ಶಿವಕುಮಾರ್ ನೀಡಿದ್ದ ಹೇಳಿಕೆ ಬಗ್ಗೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ ಅವರು, ಏನಪ್ಪಾ… ಗ್ಯಾರಂಟಿಯ ಬಗ್ಗೆ ಏನೋ ಹೇಳಿದ್ದೀಯಲ್ಲ… ಎಂದು ಡಿಕೆಶಿ ಕಡೆಗೆ ತಿರುಗಿ ಪ್ರಶ್ನಿಸಿದರು. ಇದಕ್ಕೆ ಡಿ.ಕೆ. ಶಿವಕುಮಾರ್, ನಾನು ಏನೂ‌ ಹೇಳಿಲ್ಲ ಎಂದು ಕೈಸನ್ನೆ ಮಾಡಿದರು. ನೀನು ಪೇಪರ್ ನೋಡಿಲ್ಲಪ್ಪ, ನಾನು ನೋಡಿದ್ದೇನೆ. ಪೇಪರ್‌ನಲ್ಲಿ ನೀನು ಹೇಳಿದ್ದೀಯಾ ಎಂದು ಬಂದಿದೆ ಎಂದರು.

ಪತ್ರಿಕೆಗಳಲ್ಲಿ ನಿನ್ನದೇ ಹೆಸರು ಬಂದಿದೆ. ಯಾವುದೋ ಗ್ಯಾರಂಟಿಯ ಬಗ್ಗೆ ಏನೋ ಹೇಳಿದ್ದೀಯ ಎಂದು ಹಾಸ್ಯಮಯವಾಗಿ ಪ್ರಶ್ನಿಸಿದರು.

ಒಂದಷ್ಟು ಗ್ಯಾರಂಟಿ ಕೊಟ್ಟಿದ್ದೀವಿ. ಇದನ್ನು ನೋಡಿದ ಮೇಲೆ ನಾನು ಮಹಾರಾಷ್ಟ್ರದಲ್ಲಿ, ಕರ್ನಾಟಕದಲ್ಲಿ ಐದು ಗ್ಯಾರಂಟಿ ಕೊಟ್ಟಿದ್ದೀವಿ ಎಂದು ಹೇಳಿದ್ದೆ. ಈಗ ನೀವು(ಶಿವಕುಮಾರ್) ಒಂದು ಗ್ಯಾರಂಟಿ ಬಿಡಿ ಎಂದು ಹೇಳಿದ್ದೀರಿ ಎಂದು ಖರ್ಗೆ ವ್ಯಂಗ್ಯವಾಡಿದರು.

ಕೂಡಲೇ ಪಕ್ಕದಲ್ಲಿ ಕುಳಿತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಧ್ಯ ಪ್ರವೇಶಿಸಿ, ಯಾವುದೇ ಕಾರಣಕ್ಕೂ ಶಕ್ತಿ ಯೋಜನೆ ನಿಲ್ಲುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ದೇಶದ ಒಗ್ಗಟ್ಟು ಕಾಪಾಡಲು ಸೋನಿಯಾ, ರಾಹುಲ್ ಪ್ರಾಣ ಕೊಟ್ಟರು!: ಮಾತಿನ ಭರದಲ್ಲಿ ಖರ್ಗೆ ಭಾರೀ ಎಡವಟ್ಟು

ಚನ್ನಪಟ್ಟಣ ಉಪಚುನಾವಣೆ; ಬಂಡಲ್‌ಗಟ್ಟಲೇ ಸೀರೆ, ಪಂಚೆ ಜಪ್ತಿ

ಶೋಭಿತಾ ಜತೆ ಸಮಂತಾ ಮಾಜಿ ಪತಿಯ ಮದುವೆ ಡೇಟ್ ಫಿಕ್ಸ್

ಹಾಸನಾಂಬೆ ದರ್ಶನಕ್ಕೆ ಬಿಟ್ಟಿದ್ದ 300 ವಿಶೇಷ ಬಸ್ ಸಂಚಾರ ರದ್ದು! ಕಾರಣವೇನು ಗೊತ್ತಾ?

TAGGED:Shakti Yojana review statement: Kharge slammed DCM's statement on stage
Share This Article
Facebook Twitter Copy Link Print
Previous Article ಚನ್ನಪಟ್ಟಣ ಉಪಚುನಾವಣೆ; ಬಂಡಲ್‌ಗಟ್ಟಲೇ ಸೀರೆ, ಪಂಚೆ ಜಪ್ತಿ
Next Article ಬಿಸಿ ಬಿಸಿ ಇಡ್ಲಿಯಲ್ಲಿ ಜಿರಳೆ ಪತ್ತೆ; ಹೋಟೆಲ್ ಬಗ್ಗೆ ಗ್ರಾಹಕರ ಆಕ್ರೋಶ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?