newsics.com
ಲವ್ ಮಾಕ್ಟೈಲ್ 2′ ನಟಿ ರೆಚೆಲ್ ಡೇವಿಡ್ ಸದ್ದಿಲ್ಲದೇ ದಾಂಪತ್ಯ ಜೀವನಕ್ಕೆ ಕಾಲಿಟಿದ್ದಾರೆ. ಪತಿ ಜೊತೆಗಿನ ಮದುವೆಯ ಸುಂದರ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಲವ್ ಮಾಕ್ಟೈಲ್ 2’ ಸಿನಿಮಾದಲ್ಲಿ ಡಾರ್ಲಿಂಗ್ ಕೃಷ್ಣಗೆ ನಾಯಕಿಯಾಗಿ ನಟಿಸಿದ್ದ ರೆಚೆಲ್ ಆ್ಯಂಟೋ ಅವರನ್ನು ಕ್ರಿಶ್ಚಿಯನ್ ಪದ್ಧತಿಯಂತೆ ಮದುವೆಯಾಗಿದ್ದಾರೆ.
ಇನ್ನು ನಟಿ ಬಿಳಿ ಬಣ್ಣದ ಗೌನ್ನಲ್ಲಿ ಮಿಂಚಿದ್ರೆ, ವರ ಕಪ್ಪು ಬಣ್ಣದ ಸೂಟ್ ಧರಿಸಿದ್ದರು. ಚರ್ಚ್ನಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ರೆಚೆಲ್ ಜೋಡಿ ಉಂಗುರ ಬದಲಾಯಿಸಿಕೊಂಡು ಹೊಸ ಬದುಕಿಗೆ ಕಾಲಿಟ್ಟಿದ್ದಾರೆ.
ಮೂಲತಃ ಬೆಂಗಳೂರಿನವರಾದ ರೆಚೆಲ್ ಕನ್ನಡದ ಲವ್ ಮಾಕ್ಟೈಲ್ 2 , ಚೆಫ್ ಚಿದಂಬರ ಸಿನಿಮಾದಲ್ಲಿ ನಟಿಸಿದ್ದಾರೆ. ಮಲಯಾಳಂ ಸಿನಿಮಾಗಳಲ್ಲಿಯೂ ನಟಿಸಿ ಸೈ ಎನಿಸಿಕೊಂಡಿದ್ದಾರೆ