newsics.com
ಬೆಂಗಳೂರು: 69ನೇ ಕನ್ನಡ ರಾಜ್ಯೋತ್ಸವ ನಿಮಿತ್ತ ಸಿಎಂ ಸಿದ್ದರಾಮಯ್ಯ ಇಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾಯಿ ಭುವನೇಶ್ವರಿಗೆ ಪುಷ್ಪ ನಮನ ಸಲ್ಲಿಸಿ, ರಾಷ್ಟ್ರ ಧ್ವಜ ಹಾಗೂ ಕನ್ನಡ ಧ್ವಜಾರೋಹಣ ನೆರವೇರಿಸಿದರು.
ಇನ್ನು ಕಾರ್ಯಕ್ರಮದಲ್ಲಿ ರಾಜ್ಯದ್ಯಂತ ಹಲವು ಶಾಲೆಗಳ ಶಾಲಾ ಮಕ್ಕಳು ಪಾಲ್ಗೊಂಡಿದ್ದು, ಕನ್ನಡ ಗೀತೆಗಳಿಗೆ ನೃತ್ಯ ಮಾಡುವ ಮೂಲಕ ಪ್ರೇಕ್ಷಕರ ಗಮನ ಸೆಳೆದರು. ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್, ಶಿಕ್ಷಣ ಸಚಿವ ಮಧು ಬಂಗಾರಪ್ಪ ಉಪಸ್ಥಿತರಿದ್ದರು.