newsics.com
ಬೆಂಗಳೂರು : ಪಟಾಕಿ ಸಿಡಿಸುವಾಗ ನಗರದಲ್ಲಿ ಸಂಭವಿಸಿದ ಅವಘಡದಲ್ಲಿ ಮಕ್ಕಳು ಸೇರಿದಂತೆ 8ಕ್ಕೂ ಜನರಿಗೆ ಗಾಯಗಳಾಗಿದ್ದು, ಗಾಯಗೊಂಡವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೂವರು ಮಕ್ಕಳು ನಾರಾಯಣ ನೇತ್ರಾಲಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಮೂವರಿಗೂ ಸಣ್ಣ ಪ್ರಮಾಣದ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಇನ್ನು ಮಿಂಟೋ ಆಸ್ಪತ್ರೆಯಲ್ಲಿ 5 ವರ್ಷದ ಬಾಲಕ ಮತ್ತು 18 ವರ್ಷದ ಯುವಕ ಸೇರಿ ಇಬ್ಬರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಇಬ್ಬರು ಬೇರೆಯವರು ಪಟಾಕಿ ಸಿಡಿಸುವುದನ್ನು ಸಮೀಪದಲ್ಲಿ ನಿಂತು ನೋಡುವಾಗ ಸಿಡಿದ ಪಟಾಕಿ ಕಣ್ಣಿಗೆ ತಾಕಿ ಗಾಯಗಳಾಗಿವೆ.