newsics.com
ಉಡುಪಿ: ಲಾರಿ ಹಾಗೂ ಟೂರಿಸ್ಟ್ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ 17 ಪ್ರವಾಸಿಗರು ಗಾಯಗೊಂಡಿರುವ ಘಟನೆ ಉಡುಪಿ ತಾಲೂಕಿನ ಉದ್ಯಾವರ ಗ್ರಾಮದಲ್ಲಿ ನಡೆದಿದೆ.
ಉದ್ಯಾವರ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಈ ಅಪಘಾತಸಂಭವಿಸಿದೆ. ಕೊಲ್ಲೂರು ದೇವಾಲಯಕ್ಕೆ ತೆರಳುತ್ತಿದ್ದ ಪ್ರವಾಸಿಗರ ಬಸ್, ಮುಂಜಾನೆ ರಸ್ತೆ ಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿ ರಭಸಕ್ಕೆ ಪ್ರವಾಸಿಗರ ಬಸ್ ನುಜ್ಜುಗುಜ್ಜಾಗಿದೆ. ಇನ್ನು ಗಾಯಾಳುಗಳನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.