newsics.com
ಹಿಜಾಬ್ ವಿರೋಧಿಸಿ ಯುವತಿಯೊಬ್ಬಳು ತನ್ನ ಬಟ್ಟೆಗಳನ್ನು ತೆಗೆದು ಎಸೆದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇರಾನ್‌ನಲ್ಲಿ ಮಹಿಳೆಯರು ಹಿಜಾಬ್ ಧರಿಸುವುದನ್ನು ಬಹಳ ಹಿಂದಿನಿಂದಲೂ ವಿರೋಧಿಸಿಕೊಂಡು ಬಂದಿದ್ದಾರೆ.
ಇರಾನ್‌ನ ಇಸ್ಲಾಮಿಕ್ ಆಜಾದ್ ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನಲ್ಲಿ ಹುಡುಗಿಯೊಬ್ಬಳು ಹಿಜಾಬ್ ವಿರುದ್ಧ ಪ್ರತಿಭಟಿಸಿದ್ದಾಳೆ. ತನ್ನ ಬಟ್ಟೆ ತೆಗೆದು ಅರೆ ಬೆತ್ತಲೆಯಲ್ಲಿ ಕುಳಿತಿರುವುದು ಕಂಡು ಬಂದಿದೆ. ಈ ವೀಡಿಯೋ ಇಸ್ಲಾಮಿಕ್ ದೇಶಗಳು ಸೇರಿದಂತೆ ಜಗತ್ತಿನಾದ್ಯಂತ ಸಂಚಲನ ಮೂಡಿಸಿದೆ.
ವರದಿಗಳ ಪ್ರಕಾರ, ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಕಾಡ್ಗಿಚ್ಚಿನಂತೆ ಹಬ್ಬಿದೆ. ಇದರಲ್ಲಿ ಹುಡುಗಿಯೊಬ್ಬಳು ಅರೆನಗ್ನ ಸ್ಥಿತಿಯಲ್ಲಿ ವಿಶ್ವವಿದ್ಯಾಲಯದ ಗೋಡೆಯ ಮೇಲೆ ಕುಳಿತಿರುವುದನ್ನು ಸ್ಪಷ್ಟವಾಗಿ ಕಾಣಬಹುದು. ದೇಶದಲ್ಲಿ ಕಟ್ಟುನಿಟ್ಟಾಗಿ ಅನುಸರಿಸುವ ಇಸ್ಲಾಮಿಕ್ ಡ್ರೆಸ್ ಕೋಡ್ ವಿರುದ್ಧ ಪ್ರತಿಭಟಿಸುವಲ್ಲಿ ಈ ಹುಡುಗಿ ಅರೆಬೆತ್ತಲೆಯಾಗಿ ಕುಳಿತಿದ್ದಾಳೆ. ಪ್ರತಿಭಟನೆ ನಡೆಸುತ್ತಿದ್ದ ಯುವತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.