newsics.com
ಬೆಂಗಳೂರು: ಆತ್ಮಹತ್ಯೆಗೆ ಶರಣಾದ ನಿರ್ದೇಶಕ ಗುರುಪ್ರಸಾದ್ ಅವರ ಅಂತ್ಯಕ್ರಿಯೆ ಬ್ರಾಹ್ಮಣ ಸಂಪ್ರದಾಯದಂತೆ ನೆರವೇರಿದೆ.
ವಿಲ್ಸನ್ ಗಾರ್ಡನ್ ಚಿತಾಗಾರದಲ್ಲಿ ಕುಟುಂಬಸ್ಥರಿಂದ ಗುರುಪ್ರಸಾದ್ ಅವರ ಅಂತ್ಯಕ್ರಿಯೆ ನೆರವೇರಿಸಲಾಯಿತು. ಈ ವೇಳೆ, ಯೋಗರಾಜ್ ಭಟ್, ದುನಿಯಾ ವಿಜಯ್, ಡಾಲಿ, ಸತೀಶ್ ನೀನಾಸಂ, ತಬಲಾ ನಾಣಿ ಸೇರಿದಂತೆ ಅನೇಕರು ಭಾಗಿಯಾಗಿದ್ದರು.
1972ರಲ್ಲಿ ಕನಕಪುರದಲ್ಲಿ ಜನಿಸಿದ ಗುರುಪ್ರಸಾದ್ ರಾಮಚಂದ್ರ ಶರ್ಮಾ 2006 ರಲ್ಲಿ ತೆರೆಕಂಡ ‘ಮಠ’ ಚಿತ್ರದ ಮೂಲಕ ನಿರ್ದೇಶಕನಾಗಿ ಕನ್ನಡ ಚಿತ್ರರಂಗದಲ್ಲಿ ಸಿನಿಪಯಣ ಆರಂಭಿಸಿದರು. ನಂತ್ರ ಸಾಕಷ್ಟು ಸಿನಿಮಾ ಮಾಡಿದ್ದಾರೆ.