newsics.com
ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಜೈಲು ಸೇರಿದ್ದ ನಟ ದರ್ಶನ್ ಹೆಲ್ತ್ ಸಮಸ್ಯೆ ಯಿಂದ ಮಧ್ಯಂತರ ಜಾಮೀನಿನ ಮೇಲೆ ಹೊರ ಬಂದಿದ್ದಾರೆ. ನಟನಿಗೆ ಕೆಂಗೇರಿ ಬಿಜಿಎಸ್ ಆಸ್ಪತ್ರೆ ಆಸ್ಪತ್ರೆಯಲ್ಲಿ ನಾಲ್ಕು ದಿನಗಳಿಂದ ಚಿಕಿತ್ಸೆ ನೀಡಲಾಗುತ್ತಿದೆ.
ಜಾಮೀನು ನೀಡುವಾಗ ಪ್ರತೀ ವಾರದ ಮೆಡಿಕಲ್ ರಿಪೋರ್ಟ್ ಅನ್ನು ಸಲ್ಲಿಸಬೇಕು ಎಂದು ಹೈಕೋರ್ಟ್ ಷರತ್ತು ವಿಧಿಸಿತ್ತು. ಹೀಗಾಗಿ ಇಂದು ದರ್ಶನ್ ಪರ ವಕೀಲರು ಕೋರ್ಟ್‌ಗೆ ಮೆಡಿಕಲ್ ರಿಪೋರ್ಟ್ ಸಲ್ಲಿಸಲಿದ್ದಾರೆ ಎನ್ನಲಾಗಿದೆ.
ಅಕ್ಟೋಬರ್ 30ರಂದು ಮಧ್ಯಂತರ ಜಾಮೀನು ಆದೇಶ ನೀಡಿದ್ದ ನ್ಯಾಯಾಲಯ ಒಂದು ವಾರದ ಮೆಡಿಕಲ್ ರಿಪೋರ್ಟ್ ಸಲ್ಲಿಕೆಗೆ ಸೂಚಿಸಿತ್ತು. ದರ್ಶನ್ ಜಾಮೀನು ಪಡೆದು ಇಂದಿಗೆ ಒಂದು ವಾರವಾದ ಹಿನ್ನೆಲೆಯಲ್ಲಿ ಮೆಡಿಕಲ್ ರಿಪೋರ್ಟ್ ಗಳನ್ನು ಕೋರ್ಟ್‌ಗೆ ಸಲ್ಲಿಕೆ ಮಾಡಬೇಕಿದೆ.
ನಟ ದರ್ಶನ್ ಕಳೆದ ನಾಲ್ಕು ದಿನಗಳಿಂದ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪತ್ನಿ ವಿಜಯಲಕ್ಷ್ಮಿಯೂ ಜೊತೆಗೆ ಇದ್ದಾರೆ. ದರ್ಶನ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗ್ತಾರಾ ಅಥವಾ ಆಸ್ಪತ್ರೆಯಲ್ಲಿದ್ದುಕೊಂಡೇ ಚಿಕಿತ್ಸೆ ಮುಂದುವರೆಸ್ತಾರಾ ಕಾದುನೋಡಬೇಕಿದೆ. ಈಗಾಗಲೇ ದರ್ಶನ್ ಗಿರುವ ಸಮಸ್ಯೆಗಳ ಬಗ್ಗೆ ಅನೇಕ ರೀತಿ ಪರೀಕ್ಷೆ ನಡೆಸುತ್ತಿರುವ ವೈದ್ಯರು ವರದಿಗಾಗಿ ಕಾಯುತ್ತಿದ್ದಾರೆ..