newsics.com
ನವದೆಹಲಿ: ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಮಂಗಳವಾರದಿಂದ ಎರಡು ದಿನ ನಡೆದ ಚುನಾವಣೆಯಲ್ಲಿ ಕಮಲಾ ಹ್ಯಾರಿಸ್ ಅವರ ವಿರುದ್ಧ ಯುಎಸ್ ಮಾಜಿ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಅವರು ಎರಡನೇ ಬಾರಿಗೆ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಆಗಿದ್ದಾರೆ.
ಈ ಮೂಲಕ ವಿಶ್ವದ ದೊಡ್ಡಣ್ಣ ರಾಷ್ಟ್ರದಲ್ಲಿ ನೆಟ್ಟಿದ್ದ ಕುತೂಹಲಕ್ಕೆ ಬುಧವಾರ ತೆರೆ ಬಿದ್ದಿದೆ.
ಭಾರೀ ಪೈಪೋಟಿ ಬಳಿಕ ಯುಎಸ್ ಅಧ್ಯಕ್ಷೀಯ ಚುನಾವಣೆಯಲ್ಲಿ (US Presidential Elections) ಯುಎಸ್ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರನ್ನು ರಿಪಬ್ಲಿಕನ್ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಿಂದಿಕ್ಕಿದ್ದಾರೆ.
ಅಮೆರಿಕದ ಅಧ್ಯಕೀಯ ಚುನಾವಣೆ 2024ರ ಫಲಿತಾಂಶ ಹೊರ ಬಿದ್ದಿದೆ. ಇದರಲ್ಲಿ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಮತಗಳ ಎಣಿಕೆಯಲ್ಲಿ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಕಮಲಾ ಹ್ಯಾರಿಸ್‌ಗಿಂತ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ರಿಪಬ್ಲಿಕನ್ ಅಧ್ಯಕ್ಷೀಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ತಮ್ಮ ಬೆಂಬಲಿಗರನ್ನು ಉದ್ದೇಶಿಸಿ ಐತಿಹಾಸಿಕ ಭಾಷಣ ಮಾಡಿದ್ದಾರೆ.
ಇದು ಹಿಂದೆಂದೂ ಯಾರೂ ನೋಡದ ಚಳವಳಿ. ನಾನೂ, ಇದು ಸಾರ್ವಕಾಲಿಕ ಶ್ರೇಷ್ಠ ರಾಜಕೀಯ ಚಳವಳಿ ಎಂದು ನಾನು ನಂಬುತ್ತೇನೆ. ಈ ದೇಶದ ಜನತೆಗೆ ಜೊತೆಗೆ ನಾನು ಯಾವತ್ತಿಗೂ ಇರುತ್ತೇನೆ. ನಾವು ನಮ್ಮ ಗಡಿಗಳನ್ನು ಸರಿಪಡಿಸಲು ಹೊರಟಿದ್ದೇವೆ, ನಮ್ಮ ದೇಶದ ವಿಚಾರಗಳನ್ನು ಸರಿಪಡಿಸಬೇಕಿದೆ. ನಾವು ಇಂದು ಇತಿಹಾಸವನ್ನು ನಿರ್ಮಿಸಿದ್ದೇವೆ, ಯಾರೂ ಯೋಚಿಸದ ಅಡೆತಡೆಗಳನ್ನು ನಾವು ಜಯಿಸಿದ್ದೇವೆ. ನಾವು ಹೆಚ್ಚಿನದನ್ನು ಸಾಧಿಸಿದ್ದು, ರಾಜಕೀಯ ಗೆಲುವಾಗಿದೆ ಎಂದರು.
ಶ್ವೇತಭವನವನ್ನು ಗೆಲ್ಲಲು ಅಗತ್ಯವಿರುವ 270 ಚುನಾವಣಾ ಮತಗಳಲ್ಲಿ ಟ್ರಂಪ್ 267 ಎಲೆಕ್ಟೊರಲ್ ಮತಗಳನ್ನು ಈಗಾಗಲೇ ಗೆದ್ದಿದ್ದಾರೆ. ಇದೊಂದು ದೊಡ್ಡ ಕೆಲಸ. ಇದು ಪ್ರಪಂಚದ ಅತ್ಯಂತ ಪ್ರಮುಖ ಕೆಲಸ.. ನಾನು ನಿಮಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತೇನೆ, ಅದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ಭರವಸೆಯಿಂದ ಟ್ರಂಪ್ ನುಡಿದರು.
ಚುನಾವಣಾ ಪ್ರಚಾರ ವೇಳೆ ಡೊನಾಲ್ಡ್ ಟ್ರಂಪ್ ಮೇಲೆ ಸಾಕಷ್ಟು ಬಾರಿ ಹತ್ಯೆಯತ್ನ ನಡೆದಿತ್ತು, ಕೂದಲೆಳೆ ಅಂತರದಲ್ಲಿ ಅವರು ಬಚಾವಾಗಿದ್ದರು. ಅದನ್ನು ಸಹ ಇಂದಿನ ಭಾಷಣದಲ್ಲಿ ಟ್ರಂಪ್ ಪ್ರಸ್ತಾಪಿಸಿದರು. ದೇವರು ಒಂದು ಕಾರಣಕ್ಕಾಗಿ ನನ್ನ ಜೀವವನ್ನು ಉಳಿಸಿದನು. ಆ ಕಾರಣವು ನಮ್ಮ ದೇಶವನ್ನು ಉಳಿಸಲು ಮತ್ತು ಅಮೇರಿಕಾವನ್ನು ಶ್ರೇಷ್ಠತೆಗೆ ಮರುಸ್ಥಾಪಿಸಲು ಆಗಿತ್ತು. ಈಗ ನಾವು ಒಟ್ಟಾಗಿ ಆ ಮಿಷನ್ ನ್ನು ಪೂರೈಸಲಿದ್ದೇವೆ ಎಂದರು.