newsics.com
ಬೆಂಗಳೂರು: ಮುಡಾ ನಿವೇಶನ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಬುಧವಾರ ಸತತ 2 ಗಂಟೆ ಲೋಕಾಯುಕ್ತ ವಿಚಾರಣೆ ಎದುರಿಸಿದರು.
ಇದೀಗ ಲೋಕಾಯುಕ್ತ ವಿಚಾರಣೆ ಅಂತ್ಯಗೊಂಡಿದ್ದು, ವಿಚಾರಣೆ ಮುಗಿಸಿ ಸಿಎಂ ಸಿದ್ದರಾಮಯ್ಯ ಮೈಸೂರಿನ ಅತಿಥಿಗೃಹಕ್ಕೆ ತೆರಳಿದ್ದಾರೆ. ಕೆಲ ಹೊತ್ತಿನಲ್ಲೇ ಅವರು ಚನ್ನಪಟ್ಟಣ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ.
ಪ್ರಕರಣದ ಎ-1 ಆರೋಪಿ ಸಿಎಂ ಸಿದ್ದರಾಮಯ್ಯಗೆ ಲೋಕಾಯುಕ್ತ ಅಧಿಕಾರಿಗಳು ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ.
ಬುಧವಾರ ಬೆಳಗ್ಗೆ 10:10 ಗಂಟೆಗೆ ಸಿಎಂ ಸಿದ್ದರಾಮಯ್ಯ ಮೈಸೂರು ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದರು. ಲೋಕಾಯುಕ್ತ ಎಸ್ಪಿ ಉದೇಶ್ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಸತತ 2 ಗಂಟೆ ಕಾಲ ವಿಚಾರಣೆ ನಡೆಸಲಾಗಿದೆ.
ಮೊದಲು ಆಧಾರ್ ಕಾರ್ಡ್ ತೋರಿಸಿದ ಬಳಿಕ ಅವರಿಗೆ ಪ್ರಶ್ನೆಗಳನ್ನು ಕೇಳಲಾಯಿತು.
ಈ ಮಧ್ಯೆ, ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದೆ. ಸಿಎಂ ಸಿದ್ದರಾಮಯ್ಯ-ಲೋಕಾಯುಕ್ತ ನಡುವೆ ಮ್ಯಾಚ್ ಫಿಕ್ಸಿಂಗ್ ಆಗಿದೆ. ಸಿಎಂ ಸಿದ್ದರಾಮಯ್ಯ ಅವರೇ ಪ್ರಶ್ನೆಗಳನ್ನು ಕೊಟ್ಟು ಅವರೇ ಉತ್ತರ ನೀಡಿದ್ದಾರೆ ಎಂದು ಬಿಜೆಪಿ ನಾಯಕರು ದೂರಿದ್ದಾರೆ.
ಲಘು ವಾಹನ ಡಿಎಲ್ ಉಳ್ಳವರು 7500 ಕೆಜಿಗಿಂತ ಕಡಿಮೆ ತೂಕದ ವಾಹನವನ್ನೂ ಓಡಿಸಬಹುದು: ಸುಪ್ರೀಂ ತೀರ್ಪು
ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಲೋಕಾಯುಕ್ತ ಕೇಳಿದ ಪ್ರಶ್ನೆಗಳೇನು..?
ರಾಯರ ದರ್ಶನ ಪಡೆದ ರಿಷಿ ಸುನಾಕ್ ; ಅಳಿಯ, ಪುತ್ರಿಯ ಜೊತೆ ಪೂಜೆ ಸಲ್ಲಿಸಿದ ಸುಧಾಮೂರ್ತಿ