Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಟ್ರಂಪ್‌ ಗೆಲುವಿಗೆ ಕಾರಣವೇನು?; ವಿಕ್ಟರಿ ಭಾಷಣದಲ್ಲಿ ಹೇಳಿದ್ದೇನು?
ಪ್ರಮುಖವಿದೇಶ

ಟ್ರಂಪ್‌ ಗೆಲುವಿಗೆ ಕಾರಣವೇನು?; ವಿಕ್ಟರಿ ಭಾಷಣದಲ್ಲಿ ಹೇಳಿದ್ದೇನು?

Share
1 Min Read
SHARE

newsics.com

ಅಮೆರಿಕಾದ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್‌ ಗೆದ್ದು ಬೀಗಿದ್ದಾರೆ. ಗೆಲುವು ಖಚಿತವಾಗುತ್ತಿದ್ದಂತೆ ವಿಕ್ಟರಿ ಭಾಷಣ ಮಾಡಿರುವ ಟ್ರಂಪ್ ಅವರು ಅಮೆರಿಕಾವನ್ನು ಮತ್ತೊಮ್ಮೆ ಗ್ರೇಟ್‌ ಆಗಿಸುವೆ ಎಂದು ಶಪಥ ಮಾಡಿದ್ದಾರೆ.

ಅಮೆರಿಕಾದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಅವರು ಆಯ್ಕೆಯಾಗಿದ್ದು, ವಿಶ್ವದ ಗಣ್ಯಾತಿಗಣ್ಯರು ಶುಭಾಶಯ ಕೋರುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಶುಭಾಶಯದ ಜೊತೆಗೆ ಅಮೆರಿಕಾ-ಭಾರತದ ಬಾಂಧವ್ಯ ಮತ್ತಷ್ಟು ಗಟ್ಟಿಯಾಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸದ್ಯದ ಮತ ಎಣಿಕೆಯ ಪ್ರಕಾರ ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಅವರು 267 ಸ್ಥಾನಗಳನ್ನು ಪಡೆದಿದ್ದಾರೆ. ಅಧಿಕೃತ ಮ್ಯಾಜಿಕ್‌ ನಂಬರ್‌ಗೆ ಕೇವಲ 3 ಸ್ಥಾನಗಳಷ್ಟೇ ಬಾಕಿ ಉಳಿದಿದೆ.
ಫಾಕ್ಸ್ ನ್ಯೂಸ್ ಪ್ರಕಾರ ಡೋನಾಲ್ಡ್ ಟ್ರಂಪ್‌ ಅವರಿಗೆ ಎಲೆಕ್ಟ್ರೋರಲ್ ಕಾಲೇಜ್ ವೋಟ್‌ಗಳ ಪೈಕಿ 277 ವೋಟ್ ಲಭ್ಯವಾಗಿದೆ ಎನ್ನಲಾಗಿದೆ. ಟ್ರಂಪ್ ಅವರ ಪ್ರತಿಸ್ಪರ್ಧಿ ಕಮಲಾ ಹ್ಯಾರಿಸ್‌ ಅವರಿಗೆ 224 ಮತಗಳು ಮಾತ್ರ ಲಭ್ಯವಾಗಿದೆ. ಡೊನಾಲ್ಡ್ ಟ್ರಂಪ್ ಅವರು ಸ್ವಿಂಗ್ ರಾಜ್ಯಗಳ ಪೈಕಿ 4 ರಾಜ್ಯಗಳಲ್ಲಿ ಗೆಲುವು ಸಾಧಿಸಿದ್ದು ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ನಿರ್ಣಾಯಕ ಪಾತ್ರವಹಿಸಿದೆ.

ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲುವಿನ ಸನಿಹಕ್ಕೆ ಬಂದ ಡೊನಾಲ್ಡ್ ಟ್ರಂಪ್ ಅವರು ವಿಕ್ಟರಿ ಭಾಷಣವನ್ನು ಮಾಡಿದ್ದಾರೆ. ಇದು ಅಮೆರಿಕಾ ಜನರ ಗೆಲುವು. ಈ ಗೆಲುವು ನಿಮಗೆ ಬಹಳ ಸಂತೋಷ, ಹೆಮ್ಮೆ ಉಂಟಾಗಲಿದೆ. ನಾವು ಇತಿಹಾಸ ನಿರ್ಮಿಸಿದ್ದೇವೆ ಎಂದು ಅಮೆರಿಕಾದ ಜನರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.

ಡೊನಾಲ್ಡ್ ಟ್ರಂಪ್‌ ಅವರು ಅಮೆರಿಕಾ ಅಧ್ಯಕ್ಷರಾಗಿ ಆಯ್ಕೆ ಆಗುತ್ತಿದ್ದಂತೆ ಉಪಾಧ್ಯಕ್ಷ ಅಭ್ಯರ್ಥಿ ಜೆ.ಡಿ ವ್ಯಾನಸ್ ಆಯ್ಕೆಯೂ ಬಹುತೇಕ ಖಚಿತವಾಗಿದೆ.

TAGGED:What is the reason for Trump's victory? What was said in the victory speech?
Share This Article
Facebook Twitter Copy Link Print
Previous Article ಮುಡಾ ಹಗರಣ ಕೇಸ್ : ಲೋಕಾಯುಕ್ತ ವಿಚಾರಣೆ ಬಳಿಕ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
Next Article ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ: ಆರೋಪಿಗಾಗಿ ಹುಬ್ಬಳ್ಳಿಯಲ್ಲಿ ಶೋಧ

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ವಿದೇಶ

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?