newsics.com
ಬೆಂಗಳೂರು: ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿಯು ರೈತರಿಂದ ನೇರವಾಗಿ ಮೆಕ್ಕೆಜೋಳ ಖರೀದಿಗೆ ಮುಂದಾಗಿದೆ.
ಪ್ರತಿ ಕ್ವಿಂಟಲ್‌ಗೆ ₹2,400 ದರದಲ್ಲಿ (ಸರ್ಕಾರ ನಿಗದಿಪಡಿಸಿರುವ ಪ್ರತಿ ಕ್ವಿಂಟಲ್‌ಗೆ ಕನಿಷ್ಠ ಬೆಂಬಲ ಬೆಲೆ ₹2,225, ಎರಡು ಗೋಣಿ ಚೀಲದ ಮೊತ್ತ ಮತ್ತು ಸಾಗಣೆ ವೆಚ್ಚ ₹175) ಖರೀದಿಸಲಿದೆ.
ಈ ಸಂಬಂಧ ನೋಡಲ್ ಅಧಿಕಾರಿಗಳು, ಸಂಚಾಲಕರು ಹಾಗೂ ಸಿಬ್ಬಂದಿಯನ್ನು ನೇಮಿಸಲಾಗಿದೆ. ನೋಡಲ್ ಅಧಿಕಾರಿಗಳು ಎಪಿಎಂಸಿ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿ ಇರಬೇಕು ಎಂದು ಕೆಎಂಎಫ್ ನಿರ್ದೇಶನ ನೀಡಿದೆ.
ಮಹಾಮಂಡಳಿಯ ವ್ಯಾಪ್ತಿಗೆ ಬರುವ ಐದು ಪಶು ಆಹಾರ ಘಟಕಗಳ ಸಾಮರ್ಥ್ಯ ಮತ್ತು ಅವಶ್ಯಕತೆಗೆ ಅನುಗುಣವಾಗಿ ರೈತರಿಂದ ಮೆಕ್ಕೆಜೋಳ ಖರೀದಿಸಲಾಗುವುದು. ಒಟ್ಟು 12 ಖರೀದಿ ಕೇಂದ್ರ ತೆರೆಯಲಾಗುತ್ತಿದ್ದು, ನವೆಂಬರ್ 14ರೊಳಗೆ ಖರೀದಿ ಪ್ರಕ್ರಿಯೆ ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದೆ.