newsics.com
ಬೆಂಗಳೂರು: ಸರ್ಕಾರಿ ಕಚೇರಿಗಳಲ್ಲಿ ಹಾಗೂ ಕಚೇರಿಯ ಆವರಣಗಳಲ್ಲಿ ಧೂಮಪಾನ ಹಾಗೂ ಇತರೆ ತಂಬಾಕು ಉತ್ಪನ್ನಗಳ ಸೇವನೆಯನ್ನು ನಿಷೇಧಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶವನ್ನು ಹೊರಡಿಸಿದೆ.

ಒಂದು ವೇಳೆ ನಿಯಮ ಮೀರಿದರೆ ಕಠಿಣ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ. ಧೂಮಪಾನ ನಿಷೇಧಿಸಿ, ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಾಗರತ್ನ ವಿ ಪಾಟಿಲ್ ಅಧಿಸೂಚನೆ ಹೊರಡಿಸಿದ್ದಾರೆ.
ನೋಟಿಫಿಕೇಶನ್ ಉಲ್ಲೇಖಿಸಿರುವಂತೆ ಧೂಮಪಾನ ಹಾಗೂ ತಂಬಾಕಿನ ಇತರ ಉತ್ಪನ್ನಗಳ ಸೇವನೆಯು ಆರೋಗ್ಯಕ್ಕೆ ಮಾರಕವಾಗಿದ್ದು, ಸಾರ್ವಜನಿಕ ಪ್ರದೇಶಗಳಲ್ಲಿ ಇಂತಹ ಉತ್ಪನ್ನಗಳ ಸೇವನೆಯನ್ನು ಸಿಗರೇಟುಗಳು ಮತ್ತು ಇತರ ತಂಬಾಕು ಉತ್ಪನ್ನಗಳು (ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ ನಿಯಂತ್ರಣ, ಉತ್ಪಾದನೆ, ಸರಬರಾಜು ಮತ್ತು ವಿತರಣೆ) ಕಾಯಿದೆ, 2003 (ಕೇಂದ್ರ ಅಧಿನಿಯಮ 34/2003)ರಲ್ಲಿ ಸಂಪೂರ್ಣವಾಗಿ ನಿಷೇಧಿಸಲಾಗಿದೆ.