newsics.com
ಮುಂಬೈ: 14 ವರ್ಷದ ಬಾಲಕಿಯ ಜತೆ ಲೈಂಗಿಕ ಚಟುವಟಿಕೆ ನಡೆಸುತ್ತಿರುವಾಗಲೇ ವಜ್ರ ಕಂಪನಿಯ ಮ್ಯಾನೇಜರ್ ಸಾವನ್ನಪ್ಪಿರುವ ವಿಲಕ್ಷಣ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.
ಸೂರತ್‌ನ ಡೈಮಂಡ್ ಫ್ಯಾಕ್ಟರಿಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ 14ರ ಹರೆಯದ ಬಾಲಕಿಯ ಜತೆ ಹೋಟೆಲ್ ರೂಮ್‌ನಲ್ಲಿ ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಿದ ನಂತರ ಹಠಾತ್ ಸಾವನ್ನಪ್ಪಿದ್ದು, ಈ ಸುದ್ದಿ ಇದೀಗ ಭಾರೀ ವೈರಲ್ ಆಗಿದೆ.
ಈ ವಿಚಿತ್ರ ಘಟನೆ ಮುಂಬೈನಲ್ಲಿ ನಡೆದಿದ್ದು, ಗುಜರಾತ್ ಮೂಲದ ವ್ಯಕ್ತಿಯೊಬ್ಬ 14 ವರ್ಷದ ಬಾಲಕಿಯನ್ನು ಮುಂಬೈಗೆ ಕರೆತಂದು ಹೋಟೆಲ್ ರೂಮಿನಲ್ಲಿ ಆಕೆಯ ಜತೆ ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಈ ವೇಳೆ ಆತ ಹಠಾತ್ ಸಾವನ್ನಪ್ಪಿದ್ದು, ಆತನ ಸಾವಿಗೆ ಹೃದಯಾಘಾತ ಮತ್ತು ಅತಿಯಾದ ವಯಾಗ್ರ ಸೇವನೆ ಕಾರಣ ಎಂದು ಹೇಳಲಾಗಿದೆ.
ಪೊಲೀಸ್ ಮೂಲಗಳ ಪ್ರಕಾರ, ಸೂರತ್‌ನ ಡೈಮಂಡ್ ಫ್ಯಾಕ್ಟರಿಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ 41 ವರ್ಷದ ಈ ವ್ಯಕ್ತಿ ಬಾಲಕಿಯ ಕುಟುಂಬಕ್ಕೆ ಆರ್ಥಿಕವಾಗಿ ಸಹಾಯ ಮಾಡುತ್ತಿದ್ದ. ಅಲ್ಲದೆ ಬಾಲಕಿಗೂ ವಜ್ರದ ಫ್ಯಾಕ್ಟರಿಯಲ್ಲಿಯೇ ಕೆಲಸ ಕೊಟ್ಟಿದ್ದ.
ಬಾಲಕಿಯ ಕುಟುಂಬದೊಂದಿಗೆ ಉತ್ತಮ ಸಂಬಂಧ ಹೊಂದಿದ್ದ ಮ್ಯಾನೇಜರ್ ಹಣದ ಸಹಾಯ ಕೂಡ ಮಾಡುತ್ತಿದ್ದ. ಅಷ್ಟೇ ಅಲ್ಲದೆ ಅವರು ಆತನ ಮೇಲಿನ ನಂಬಿಕೆಯಿಂದ ಮಗಳನ್ನು ಆತನೊಂದಿಗೆ ಕೆಲಸದ ನಿಮಿತ್ತ ಮುಂಬೈಗೆ ಕಳುಹಿಸಿದ್ದರು.
ನವೆಂಬರ್ 2 ರಂದು ಮ್ಯಾನೇಜರ್ ಕೆಲಸದ ನಿಮಿತ್ತ ಆ ಬಾಲಕಿಯನ್ನು ಮುಂಬೈಗೆ ಕರೆತಂದು ಇಲ್ಲಿನ ಗ್ರಾಂಟ್ ರಸ್ತೆಯಲ್ಲಿರುವ ಹೊಟೇಲ್‌ನಲ್ಲಿ ಬಾಲಕಿಯ ನಕಲಿ ಆಧಾರ್ ಕಾರ್ಡ್ ತೋರಿಸಿ ಆಕೆಯೊಂದಿಗೆ ಹೊಟೇಲ್ ರೂಮ್‌ನಲ್ಲಿ ತಂಗಿದ್ದ.
ನೀನು ದೈಹಿಕ ಸಂಪರ್ಕಕ್ಕೆ ಸಹಕರಿಸದಿದ್ದರೆ ನಿನ್ನ ಕುಟುಂಬಕ್ಕೆ ಹಣ ನೀಡುವುದನ್ನು ನಿಲ್ಲಿಸುತ್ತೇನೆ. ಇಲ್ಲಿಯವರೆಗೆ ಕೊಟ್ಟ ಹಣವನ್ನು ಸಹ ವಾಪಸ್ ಪಡೆಯುತ್ತೇನೆ ಎಂದು ಬ್ಲ್ಯಾಕ್‌ಮೇಲ್ ಮಾಡಿದ್ದಾನೆ. ಇದರಿಂದ ಆಘಾತಕ್ಕೊಳಗಾದ ಬಾಲಕಿ ಆತನಿಗೆ ಶರಣಾಗಿದ್ದಾಳೆ.
ಈ ವೇಳೆ ಆತ ಬಾಲಕಿಯ ಜತೆ ಬಲವಂತವಾಗಿ ಲೈಂಗಿಕ ಸಂಪರ್ಕ ಹೊಂದಿದ್ದಾನೆ. ಆದರೆ ಆತ ಮಿತಿಮೀರಿ ವಯಾಗ್ರ ಮಾತ್ರೆ ಸೇವಿಸಿದ್ದ ಕಾರಣ ಸಂಭೋಗದ ಬಳಿಕ ಹಠಾತ್ ಹೃದಯಾಘಾತದಿಂದ ಮೃತಪಟ್ಟಿದ್ದಾನೆ.
ಮಾಹಿತಿ ಸಿಕ್ಕ ತಕ್ಷಣ ಮುಂಬೈಗೆ ಆಗಮಿಸಿದ ಬಾಲಕಿಯ ತಾಯಿ ಮೃತ ಮ್ಯಾನೇಜರ್ ವಿರುದ್ಧ ಪೊಲೀಸ್ ದೂರು ನೀಡಿದ್ದಾರೆ. ಪೊಲೀಸರು BNS ಮತ್ತು POCSO ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಈ ಬಗ್ಗೆ ತನಿಖೆ ನಡೆಸಲಾಗುವುದು. ಆರೋಪಿ ಬದುಕಿಲ್ಲದ ಕಾರಣ ಸಾರಾಂಶ ವರದಿ ತಯಾರಿಸಿ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರಿನ ಬಿಷಪ್ ಕಾಟನ್ ಶಾಲೆಗೆ ಬಾಂಬ್ ಬೆದರಿಕೆ ಇಮೇಲ್: ಬಾಂಬ್ ನಿಷ್ಕ್ರಿಯ ದಳ ದೌಡು!