newsics.com
ಚಿಕ್ಕಮಗಳೂರು: ಚಿಕ್ಕಮಗಳೂರಿನ ಹಲವು ಗ್ರಾಮಗಳು ಕಾಡಾನೆ ಉಪಟಳದಿಂದ ಕಂಗೆಟ್ಟಿದ್ದು, 13 ಗ್ರಾಮಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಇದೀಗ ಹಲವೆಡೆ ಶಾಲಾ-ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಚಿಕ್ಕಮಗಳೂರಿನ ವಿವಿಧೆಡೆ ಬೀಟಮ್ಮ ಗ್ಯಾಂಗ್ ಕಾಡಾನೆ ಹಿಂಡು ಬೀಡುಬಿಟ್ಟಿದ್ದು, ಮುಂಜಾಗೃತಾ ಕ್ರಮವಾಗಿ ಹಲವು ಗ್ರಾಮಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಚಿಕ್ಕಮಗಳೂರಿನ ವಸ್ತಾರೆ, ಮೂಗ್ತಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದೆ. ಈ ಎರಡೂ ಗ್ರಾಮ ಪಂಚಾಯ್ತಿ ವ್ಯಾಪ್ತಿಯ 13 ಗ್ರಾಮಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಅಲ್ಲದೇ ಈ ಗ್ರಾಮಗಳಲ್ಲಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ.
ಶಾಲೆಗಳಿಗೆ ರಜೆ ನೀಡಿರುವುದರಿಂದ ಈ ಭಾಗದಲ್ಲಿ ವಿದ್ಯಾರ್ಥಿಗಳು ಹಾಗೂ ಶಾಲಾ-ಕಾಲೇಜು ಸಿಬ್ಬಂದಿಗಳ ಓಡಾಟಕ್ಕೂ ನಿರ್ಬಂಧ ವಿಧಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ