newsics.com
ದೆಹಲಿ: ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಬದಲಾವಣೆ ಕಂಡುಬರುತ್ತಿದೆ. ಡಾಲರ್ ಬೆಲೆ 4 ತಿಂಗಳ ಗರಿಷ್ಠ ಮಟ್ಟಕ್ಕೆ ತಲುಪಿದ್ದು, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಭಾರಿ ಕುಸಿತ ಕಂಡಿದೆ.
ಕಳೆದ ಎರಡು ದಿನಗಳಲ್ಲಿ 24ಕ್ಯಾರೆಟ್ ಚಿನ್ನದ ಬೆಲೆ ರೂ. 120 ಕಡಿಮೆ.. 22ಕ್ಯಾರೆಟ್ ಚಿನ್ನದ ಬೆಲೆ ರೂ. 110 ಇಳಿಕೆಯಾಗಿದೆ. ಕ್ಯಾರಟ್ ಆಭರಣ ಚಿನ್ನದ ಬೆಲೆ 7,275 ರೂನಿಂದ 7,270 ರೂಗೆ ಇಳಿದಿದೆ. ಭಾರತದಲ್ಲಿ ಸದ್ಯ 10 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ 72,700 ರೂಪಾಯಿ ಇದೆ. 24 ಕ್ಯಾರಟ್ ನ ಅಪರಂಜಿ ಚಿನ್ನದ ಬೆಲೆ 79,300 ರೂಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,300 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 72,700 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಂ ಗೆ 9,300 ರುಪಾಯಿ ಇದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ರೂ. 72,890 ಆಗಿದ್ದರೆ 24 ಕ್ಯಾರೆಟ್ ಚಿನ್ನದ ಬೆಲೆ ರೂ. 79,500. ಇನ್ನು ದೇಶದ ಆರ್ಥಿಕ ರಾಜಧಾನಿ ಮುಂಬೈನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ರೂ. 72,740 ಆಗಿದ್ದರೆ 24 ಕ್ಯಾರೆಟ್ ತುಲಾಂ ಚಿನ್ನದ ಬೆಲೆ ರೂ. 79,350.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 22 ಕ್ಯಾರಟ್ ನ 10 ಗ್ರಾಂ ಚಿನ್ನದ ಬೆಲೆ: 72,700 ರೂ
- 24 ಕ್ಯಾರಟ್ ನ 10 ಗ್ರಾಂ ಚಿನ್ನದ ಬೆಲೆ: 79,300 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 93 ರೂ