newsics.com
ದೆಹಲಿ: ಟೀಂ ಇಂಡಿಯಾದ ಮಾಜಿ ಆಟಗಾರ ಸಂಜಯ್ ಬಂಗಾರ್ ಅವರ ಹಿರಿಯ ಮಗ ಆರ್ಯನ್, ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ನಂತರ ಹುಡುಗಿಯಾಗಿ ರೂಪಾಂತರಗೊಂಡಿದ್ದಾರೆ. ಈ ಕುರಿತಾದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.
ಸಂಜಯ್ ಬಂಗಾರ್ ಟೀಮ್ ಇಂಡಿಯಾ ಪರ 12 ಟೆಸ್ಟ್, 15 ಏಕದಿನ ಪಂದ್ಯಗಳನ್ನಾಡಿದ್ದಾರೆ. ಹಾಗೆಯೇ ಭಾರತ ತಂಡದ ಬ್ಯಾಟಿಂಗ್ ಕೋಚ್ ಆಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಅಷ್ಟೇ ಅಲ್ಲದೆ ಆರ್ಸಿಬಿ ಸೇರಿದಂತೆ ಒಂದಷ್ಟು ತಂಡಗಳ ಮುಖ್ಯ ಕೋಚ್ ಹುದ್ದೆಯಲ್ಲಿಯೂ ಕಾಣಿಸಿಕೊಂಡಿದ್ದಾರೆ.
ಸಂಜಯ್ ಬಂಗಾರ್ ಅವರ ಹಿರಿಯ ಮಗ ಆರ್ಯನ್ ಕಳೆದ 10 ತಿಂಗಳಿಂದ ಹಾರ್ಮೋನ್ ಬದಲಾವಣೆಗಾಗಿ ಚಿಕಿತ್ಸೆ ಪಡೆದಿದ್ದಾರೆ. ಇದೀಗ 10 ತಿಂಗಳ ಶಸ್ತ್ರಚಿಕಿತ್ಸೆಯ ನಂತರ ಹುಡುಗಿಯಾಗಿ ರೂಪಾಂತರಗೊಂಡಿರುವುದಾಗಿ ಅವರು ತಿಳಿಸಿದ್ದಾರೆ. ಅಲ್ಲದೆ ಇದಕ್ಕಾಗಿ ನನ್ನ ಕ್ರಿಕೆಟ್ ಕೆರಿಯರ್ ಅನ್ನು ತ್ಯಾಗ ಮಾಡುತ್ತಿದ್ದೇನೆ. ಇನ್ಮುಂದೆ ನನ್ನ ಹೆಸರು ಆರ್ಯನ್ ಅಲ್ಲ, ಬದಲಾಗಿ ಅನಯಾ ಎಂದಿದ್ದಾರೆ. ಸದ್ಯ ಅನಯಾ ಬಂಗಾರ್ ಇಂಗ್ಲೆಂಡ್‌ನ ಮ್ಯಾಂಚೆಸ್ಟರ್‌ನಲ್ಲಿ ವಾಸಿಸುತ್ತಿದ್ದಾರೆ.