Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹೆಚ್ಡಿಕೆಗೆ “ಕರಿಯ ಕುಮಾರಸ್ವಾಮಿ” ಎಂದ ಜಮೀರ್
ಕರ್ನಾಟಕಪ್ರಮುಖ

ಹೆಚ್ಡಿಕೆಗೆ “ಕರಿಯ ಕುಮಾರಸ್ವಾಮಿ” ಎಂದ ಜಮೀರ್

Share
1 Min Read
SHARE

newsics.com

ಬೆಂಗಳೂರು: ‘ಬಿಜೆಪಿ ಅವರಿಗಿಂತ ಕರಿಯ ಕುಮಾರಸ್ವಾಮಿ ಖತರ್ನಾಕ್‌..’ ಎಂದು ಸಚಿವ ಜಮೀರ್‌ ಅಹ್ಮದ್‌ ಖಾನ್‌ ಹೇಳಿದ್ದು ವಿವಾದಕ್ಕೆ ಕಾರಣವಾಗಿದೆ. ಈ ಹಿನ್ನೆಲೆ ಜನಾಂಗೀಯ ದ್ವೇಷಿ ಜಮೀರ್‌ ಅಹ್ಮದ್‌ ಖಾನ್‌ ವಿರುದ್ಧ ಕ್ರಮ ಕೈಗೊಳ್ಳುವಂತೆ ಜೆಡಿಎಸ್‌ ಒತ್ತಾಯ ಮಾಡಿದೆ.

ಹೌದು, ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ಸಚಿವ ಜಮೀರ್ ಅಹ್ಮದ್ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಭಾಷಣದ ಮಧ್ಯೆ “ಕರಿಯ ಕುಮಾರಸ್ವಾಮಿ” ಎಂದು ಟೀಕಿಸಿದ್ದಾರೆ. ಈ ಮೂಲಕ ಕಪ್ಪು ವರ್ಣದ ಜನಾಂಗೀಯ ನಿಂದನೆ ಮಾಡಿದ್ದಾರೆ.

ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ ಪರವಾಗಿ ಜಮೀರ್ ಅಹ್ಮದ್ ಪ್ರಚಾರಕ್ಕೆ ಇಳಿದಿದ್ದರು. ಪ್ರಚಾರ ಭಾಷಣದಲ್ಲಿ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ಮಾಡುವ ಭರದಲ್ಲಿ “ಬಿಜೆಪಿಯವರಿಗಿಂತ ಕಾಲಾ ಕುಮಾರಸ್ವಾಮಿ (ಕರಿಯ ಕುಮಾರಸ್ವಾಮಿ) ಹೆಚ್ಚು ಖತರ್ನಾಕ್” ಎಂದು ಉರ್ದುವಿನಲ್ಲಿ ಹೇಳಿದ್ದಾರೆ. ಹೀಗಾಗಿ, ಕಪ್ಪು ವರ್ಣದವರ ವಿರುದ್ಧ ಜಮೀರ್‌ ಜನಾಂಗೀಯ ನಿಂದನೆ ಮಾಡಿದ್ದಾರೆ ಎನ್ನುವ ಆರೋಪಗಳು ಕೇಳಿ ಬಂದಿದ್ದು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗುತ್ತಿದೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಜೆಡಿಎಸ್‌, ‘ವರ್ಣನಿಂದಕ, ಜನಾಂಗೀಯ ದ್ವೇಷಿ ಮಿಸ್ಟರ್‌ ಜಮೀರ್‌, ನಿನ್ನನ್ನು ರಾಜಕೀಯವಾಗಿ ಬೆಳೆಸಿದ್ದ ದೇವೇಗೌಡರ ಕುಟುಂಬವನ್ನೇ ಖರೀದಿ ಮಾಡುತ್ತೇನೆ ಎನ್ನುವ ನಿನ್ನ ಅಧಿಕಾರ ಮತ್ತು ದುಡ್ಡಿನ ದರ್ಪ ಹೆಚ್ಚು ದಿನ ಉಳಿಯಲ್ಲ.. ನಿನ್ನ ಸೊಕ್ಕಿನ ಮಾತಿಗೆ, ಕಪ್ಪು ವರ್ಣದ ಬಗ್ಗೆ ನಿನಗಿರುವ ಹೊಲಸು ಮನಸ್ಥಿತಿಗೆ ರಾಜ್ಯದ ಜನರು ತಕ್ಕ ಉತ್ತರ ನೀಡುತ್ತಾರೆ..’ ಎಂದು ಬರೆದಿದೆ.

TAGGED:" Minister Jamir Ahmed Khan saidcausing controversyKari Kumaraswamy Khatarnak is better than BJP
Share This Article
Facebook Twitter Copy Link Print
Previous Article ಕತ್ತು ಸೀಳಿದ ಸ್ಥಿತಿಯಲ್ಲಿ ಪ್ರೊಫೆಸರ್ ಶವ ಪತ್ತೆ!
Next Article ನಿಮ್ಮ ಮನೆಯಲ್ಲಿ ಸಿಂಕ್ ತುಂಬಾ ಕೊಳಕಾಗಿದ್ಯಾ?; ಹೀಗೆ ಕ್ಲೀನ್ ಮಾಡಿ!

Popular Posts

Dakshina Kannada Baby Died ದಕ್ಷಿಣ ಕನ್ನಡದಲ್ಲಿ ಭೀಕರ ದುರಂತ: ಶಾಲಾ ಬಸ್ ಮೇಲೆ ಮರ ಬಿದ್ದು 5 ವರ್ಷದ ಬಾಲಕಿ ಸಾವು

1 Min Read

C M Vijay Last Film Jananayagan Release ಬೆಂಗಳೂರಿನಲ್ಲೂ ‘ಜನ ನಾಯಕನ್’ ಜ್ವರ: ವಿಜಯ್ ಅವರ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

You Might Also Like

ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read
ಕರ್ನಾಟಕಕೃಷಿ

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read
ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?