Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮುಡಾ ಹಗರಣ ಕೇಸ್: 50-50 ಸೈಟ್ ಪಡೆದವರ ಮತ್ತೊಂದು ಪಟ್ಟಿ ಲಭ್ಯ
ಕರ್ನಾಟಕಪ್ರಮುಖ

ಮುಡಾ ಹಗರಣ ಕೇಸ್: 50-50 ಸೈಟ್ ಪಡೆದವರ ಮತ್ತೊಂದು ಪಟ್ಟಿ ಲಭ್ಯ

Share
1 Min Read
SHARE

newsics.com

ಮೈಸೂರು: ಮುಡಾ 50-50 ನಿವೇಶ ಹಂಚಿಕೆ ಹಗರಣ ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಸಂಚಲನ ಸೃಷ್ಟಿಸಿದೆ. ಈ ಮಧ್ಯೆ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ 14 ನಿವೇಶನಗಳು ಮಂಜೂರಾಗಿತ್ತು ಎನ್ನಲಾಗಿರುವ ಪಟ್ಟಿ ವೈರಲ್ ಆಗಿದೆ.

ಈ ಹಿಂದೆ ಮುಡಾದಿಂದ ಹಂಚಿಕೆ ಮಾಡಲಾಗಿದ್ದ 211 ನಿವೇಶನಗಳ ಪಟ್ಟಿ ಲಭ್ಯವಾಗಿತ್ತು. ಇದೀಗ ನಿವೇಶನ ಪಡೆದವರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರ ಹೆಸರೂ ಇರುವ ಪಟ್ಟಿ ಸಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಮಾಡಲು ವಿಪಕ್ಷಗಳಿಗೆ ಅಸ್ತ್ರ ಸಿಕ್ಕಂತಾಗಿದೆ.

ಪಟ್ಟಿಯಲ್ಲಿ ಬರೊಬ್ಬರಿ 928 ನಿವೇಶಗಳ ವಿವರ ಇದೆ. ವೈರಲ್ ಆದ ಪಟ್ಟಿಯಲ್ಲಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರು ಪಡೆದ 14 ನಿವೇಶನಗಳ ವಿವರ ಇದೆ. ಹಾಗೇ ಸಿದ್ದರಾಮಯ್ಯ ಆಪ್ತ ಹಿನ್‌ಕಲ್ ಪಾಪಣ್ಣ ಸೇರಿದಂತೆ ಹಲವರು 50:50 ಅನುಪಾತದಲ್ಲಿ ಪಡೆದಿರುವ ಸೈಟ್‌ಗಳ ವಿವರ ಕೂಡ ಇದೆ.

ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ಹೆಸರಿನಲ್ಲಿದ್ದ ಕೆಸರೆ ಗ್ರಾಮದ ಸರ್ವೆ ನಂಬರ್ 464ರಲ್ಲಿ 3.16 ಎಕರೆ ಜಮೀನನ್ನು ದೇವನೂರು ಬಡಾವಣೆ ನಿರ್ಮಾಣಕ್ಕೆ ಭೂಸ್ವಾಧೀನ ಮಾಡಿಕೊಳ್ಳಲಾಗಿತ್ತು. ಈ ಜಾಗವನ್ನು ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ದಾನ ಪತ್ರದ ಮೂಲಕ ಅವರ ಸಹೋದರ ಕೊಟ್ಟಿದ್ದರು. ಇದು ಒಟ್ಟು 1,48,104 ಚದರ ಅಡಿ ಜಾಗ ಇತ್ತು.

ಅದರ ಬದಲಿಗೆ ಮುಡಾ 2021ರಲ್ಲಿ ಪಾರ್ವತಿ ಅವರಿಗೆ ಮೈಸೂರಿನ ವಿಜಯನಗರ ಬಡಾವಣೆಯಲ್ಲಿ 38,284 ಚದರ ಅಡಿ ಜಾಗ ಅಂದರೆ 14 ನಿವೇಶನ ಕೊಟ್ಟಿದ್ದಾರೆ ಇದು ಈಗ ಚರ್ಚೆಗೆ ಕಾರಣವಾಗಿದೆ.

TAGGED:MUDA SCAM CASE: ANOTHER LIST OF BENEFICIARIES ON 50-50 SITE AVAILABLE
Share This Article
Facebook Twitter Copy Link Print
Previous Article ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ `ಲೋಕಾಯುಕ್ತ’ ಶಾಕ್
Next Article ಅಲ್‌ಖೈದಾ ಸಂಚು; ಕರ್ನಾಟಕ ಸೇರಿ 9 ರಾಜ್ಯಗಳಲ್ಲಿ NIA ದಾಳಿ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?