Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಒಂದು ಕೋಟಿವರೆಗಿನ ಸರ್ಕಾರಿ ಸಿವಿಲ್ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇ.4 ಮೀಸಲು: ಸಿದ್ದರಾಮಯ್ಯ ಸರ್ಕಾರ ನಿರ್ಧಾರ
ಕರ್ನಾಟಕಪ್ರಮುಖ

ಒಂದು ಕೋಟಿವರೆಗಿನ ಸರ್ಕಾರಿ ಸಿವಿಲ್ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇ.4 ಮೀಸಲು: ಸಿದ್ದರಾಮಯ್ಯ ಸರ್ಕಾರ ನಿರ್ಧಾರ

Share
2 Min Read
SHARE

newsics.com

ಬೆಂಗಳೂರು: ಕರ್ನಾಟಕ ಸರ್ಕಾರವು ಸರ್ಕಾರಿ ಸಿವಿಲ್ ಕಾಮಗಾರಿಗಳ ಒಂದು ಕೋಟಿ ರೂ. ವರೆಗಿನ ಗುತ್ತಿಗೆಗಳಲ್ಲಿ ಮುಸ್ಲಿಂ ಸಮುದಾಯಕ್ಕೆ ಶೇಕಡಾ 4ರಷ್ಟು ಮೀಸಲಾತಿ ನೀಡಲು ಮುಂದಾಗಿದೆ.

ಮುಖ್ಯಮಂತ್ರಿಗಳು ಈ ಪ್ರಸ್ತಾವನೆಗೆ ಅನುಮೋದನೆ ನೀಡಿದ್ದು, ಕಾಯ್ದೆಗೆ ತಿದ್ದುಪಡಿಗೆ ಸೂಚನೆ ನೀಡಿದ್ದಾರೆ. ಶಾಸಕ ಬಸನಗೌಡ ಯತ್ನಾಳ್ ಸರ್ಕಾರದ ಈ‌ ನಿರ್ಧಾರವನ್ನು ವಿರೋಧಿಸಿದ್ದಾರೆ.

ಮಹತ್ವದ ಬೆಳವಣಿಗೆಯೊಂದರಲ್ಲಿ, ಸರ್ಕಾರದ ಸಿವಿಲ್ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ಕಲ್ಪಿಸುವ ಪ್ರಸ್ತಾವನೆಗೆ ಸಿಎಂ ಸಿದ್ದರಾಮಯ್ಯ ಸಮ್ಮತಿಸಿದ್ದಾರೆ ಎಂದು ತಿಳಿದುಬಂದಿದೆ.

ಮುಸ್ಲಿಂ ಸಮುದಾಯಕ್ಕೆ ಸರ್ಕಾರದ ಗುತ್ತಿಗೆಯಲ್ಲಿ ಮೀಸಲಾತಿ ತರಲು ಸಲ್ಲಿಕೆಯಾಗಿರುವ ಪ್ರಸ್ತಾವನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮೋದನೆ ನೀಡಿದ್ದಾರೆ ಎನ್ನಲಾಗಿದ್ದು, ಕಾಯ್ದೆಯಲ್ಲಿ ಸಂಬಂಧಿತ ತಿದ್ದುಪಡಿ ಮಾಡುವಂತೆ ಹಣಕಾಸು ಇಲಾಖೆಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಒಂದು ಕೋಟಿ ರೂ.ವರೆಗಿನ ಕಟ್ಟಡ ನಿರ್ಮಾಣ ಕಾಮಗಾರಿಗಳ ಸಾರ್ವಜನಿಕ ಗುತ್ತಿಗೆಯಲ್ಲಿ ಮುಸ್ಲಿಂ ಸಮುದಾಯವರಿಗೆ ಶೇ. 4 ಮೀಸಲಾತಿ ನೀಡುವ ಬಗ್ಗೆ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಪ್ರಸ್ತಾವನೆ ಸಲ್ಲಿಸಿತ್ತು. ಇದಕ್ಕೆ ಅನುಮೋದನೆ ನೀಡಿರುವ ಸಿಎಂ, ತಿದ್ದುಪಡಿಗೆ ಸೂಚನೆ ನೀಡಿದ್ದಾರೆ.

ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದ ವೇಳೆ ಕಾಯ್ದೆಗೆ ತಿದ್ದುಪಡಿ ತಂದು ಮಂಡನೆ ಮಾಡಲು ಸರ್ಕಾರ ಮುಂದಾಗಿದೆ. ಈಗಾಗಲೇ ಎಸ್‌ಸಿ, ಎಸ್‌ಟಿ ಸಮುದಾಯಕ್ಕೆ ಗುತ್ತಿಗೆಯಲ್ಲಿ ಶೇ.24ರ ಮೀಸಲಾತಿ ನೀಡಿರುವ ಸರ್ಕಾರ, ಒಬಿಸಿ ಸಮುದಾಯಕ್ಕೆ ಶೇ 4 ಮೀಸಲಾತಿ ನೀಡಿದೆ. 2A ಅಡಿ ಗುತ್ತಿಗೆಯಲ್ಲಿ ಶೇ 15 ಮೀಸಲಾತಿ ನೀಡಲಾಗಿದೆ. ಒಟ್ಟು ಸರ್ಕಾರದ ಕಾಮಗಾರಿಗಳಲ್ಲಿ ಶೇ.43ರಷ್ಟು ಮೀಸಲಾತಿ ನೀಡಲಾಗಿದೆ. ಈಗ ಮುಸ್ಲಿಂ ಸಮುದಾಯಕ್ಕೂ ಸರ್ಕಾರದ ಕಾಮಗಾರಿಗಳಲ್ಲಿ ಶೇ.4 ರಷ್ಟು ಮೀಸಲಾತಿ ನೀಡಲು ಮುಂದಾಗಿದೆ.

ಪ್ರವರ್ಗ 2ಬಿ ಅಡಿ 1 ಕೋಟಿ ರೂ. ವರೆಗಿನ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವಂತೆ ಆಗ್ರಹಿಸಿ ಮುಸ್ಲಿಂ ಸಚಿವರು ಮತ್ತು ಶಾಸಕರು ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದರು. ಸಚಿವ ಜಮೀರ್ ಅಹ್ಮದ್ ಖಾನ್, ರಹೀಂ ಖಾನ್, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಪತ್ರ ಬರೆದಿದ್ದರು. ಈ ಪತ್ರಕ್ಕೆ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಶಾಸಕರಾದ ತನ್ವೀರ್ ಸೇಠ್, ಅಬ್ದುಲ್ ಜಬ್ಬಾರ್, ಎನ್ ಎ ಹ್ಯಾರಿಸ್, ರಿಜ್ವಾನ್ ಅರ್ಷದ್, ಆಸೀಫ್ ಸೇಠ್, ಖನೀಜಾ ಫಾತಿಮಾ, ಇಕ್ಬಾಲ್ ಹುಸೇನ್, ಬಲ್ಕಿಸ್ ಬಾನು ಸಹಿ ಮಾಡಿದ್ದರು. ಇದೀಗ ಕಾಯ್ದೆಗೆ ತಿದ್ದುಪಡಿ ಮಾಡಿ ಕಡತ ಮಂಡಿಸಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

Invitation ನಲ್ಲಿ ಮೋದಿ ಪರ ಮತ: ಮದುಮಗನ ವಿರುದ್ಧದ ಕೇಸ್‌ಗೆ ತಡೆ ನೀಡಿ ಹೈಕೋರ್ಟ್ ಆದೇಶ

ಗ್ರಂಥಾಲಯ ಅಧಿಕಾರಿಗಳಿಂದ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ

ಮುಡಾ ಹಗರಣ ಕೇಸ್: 50-50 ಸೈಟ್ ಪಡೆದವರ ಮತ್ತೊಂದು ಪಟ್ಟಿ ಲಭ್ಯ

ಇದು ಸಾಮೂಹಿಕ ಬೆತ್ತಲೆ ಮದುವೆ: 29 ಜೋಡಿ ವಧು-ವರರಷ್ಟೇ ಅಲ್ಲ, ಬಂಧುಗಳ ಮೈಮೇಲೂ ಇರಲಿಲ್ಲ‌ ಒಂಚೂರೂ‌ ಬಟ್ಟೆ!

ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ Mike Waltz   ನೇಮಕ

TAGGED:4% reservation for Muslims in government civil contracts up to one crore: Siddaramaiah government's decision
Share This Article
Facebook Twitter Copy Link Print
Previous Article ಸರ್ವಾರ್ಥ ಸಿದ್ಧಿಯೋಗ: ಈ ಐದು ರಾಶಿಯವರಿಗೆ ಭಾರೀ ಅದೃಷ್ಟ
Next Article ನಟೋರಿಯಸ್ ರಾಬರ್ ಯುಪಿಯಲ್ಲಿ ಅರೆಸ್ಟ್; ಸೆರೆಗೆ ಬಿದ್ದಿದ್ದು ಹೇಗೆ ಕಿರಾತಕ?

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?