newsics.com
ಅಮರಾವತಿ: ನಿರ್ದೇಶಕ ರಾಮ್‌ಗೋಪಾಲ್ ವರ್ಮಾ ಅವರು ಇದೀಗ ಮತ್ತೊಂದು ವಿವಾದಾತ್ಮಕ ಹೇಳಿಕೆಯಿಂದ ಅರೆಸ್ಟ್ ಆಗುವ ಮಟ್ಟಕ್ಕೆ ಸಂಕಷ್ಟವನ್ನು ತಂದುಕೊಂಡಿದ್ದಾರೆ.
ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಆಂಧ್ರ ಸಚಿವ ಹಾಗೂ ಚಂದ್ರಬಾಬು ನಾಯ್ಡು ಅವರ ಮಗ ನಾರಾ ಲೋಕೇಶ್ ಮತ್ತು ಅವರ ಪತ್ನಿ ಬ್ರಹ್ಮಿಣಿ ಅವರ ಬಗ್ಗೆ ವಿವಾದಾತ್ಮಕ ಪೋಸ್ಟ್ ಮಾಡಿ ತಗ್ಲಾಕೊಂಡಿದ್ದಾರೆ ಎನ್ನಲಾಗಿದೆ.
ವಿವಾದಾತ್ಮಕ ಪೋಸ್ಟ್ ಮಾಡಿದ ಆರೋಪದ ಮೇಲೆ ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿಯ ಪೊಲೀಸರು ರಾಮ್‌ಗೋಪಾಲ್ ವರ್ಮಾ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ರಾಮ್‌ಗೋಪಾಲ್ ವರ್ಮಾ ಅವರ ಬಗ್ಗೆ ಕೆಟ್ಟದಾಗಿ ಪೋಸ್ಟ್ ಮಾಡಿರುವ ಆರೋಪದ ಮೇಲೆ ತೆಲುಗು ದೇಶಂ ಪಕ್ಷದ (ಟಿಡಿಪಿ) ಸ್ಥಳೀಯ ಮುಖಂಡರೊಬ್ಬರು ಅಲ್ಲಿ ದೂರು ನೀಡಿದ್ದಾರೆ.
ವರ್ಮಾ ಅವರು ಅವರ ಸಿನಿಮಾದಲ್ಲಿ ಚಂದ್ರಬಾಬು ನಾಯ್ಡು ಅವರ ಬಗ್ಗೆ ಕೆಟ್ಟದಾಗಿ ಚಿತ್ರಿಸಿದ್ದಾರೆ. ಅಲ್ಲದೇ, ಸೋಷಿಯಲ್ ಮೀಡಿಯಾದಲ್ಲಿ ವಿವಾದಾತ್ಮಕ ಪೋಸ್ಟ್ ಹಾಗೂ ಕಾಮೆಂಟ್‌ಗಳನ್ನು ಮಾಡಿದ್ದಾರೆ ಎನ್ನಲಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಪದೇ ಪದೇ ಚಂದ್ರಬಾಬು ನಾಯ್ಡು ಹಾಗೂ ತೆಲುಗುದೇಶಂ ಪಕ್ಷದ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದಾರೆ. ಇನ್ನು ರಾಮ್‌ಗೋಪಾಲ್ ವಿರುದ್ಧ ಐಟಿ ಕಾಯ್ದೆಯ ಅಡಿಯಲ್ಲಿ ದೂರು ದಾಖಲಿಸಿಕೊಳ್ಳಲಾಗಿದೆ