newsics.com
ಬಳ್ಳಾರಿ: ಮಧ್ಯಾಹ್ನದ ಬಿಸಿಯೂಟ ಸೇವಿಸಿದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬಳ್ಳಾರಿಯ ಕಂಪ್ಲಿಯಲ್ಲಿ ನಡೆದಿದೆ.
ಬಿಸಿಯೂಟ ಸೇವಿಸಿದ ಬಳಿಕ 45 ಕ್ಕೂ ಹೆಚ್ಚು ಮಕ್ಕಳಿಗೆ ವಾಂತಿ-ಭೇದಿ ಆಗಿದೆ. ತಕ್ಷಣ ಮಕ್ಕಳನ್ನು ಕಂಪ್ಲಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿಚಾರ ತಿಳಿದು ತಹಶೀಲ್ದಾರ ಹಾಗೂ ತಾಲೂಕು ವೈದ್ಯಾಧಿಕಾರಿ ವಿದ್ಯಾರ್ಥಿಗಳ ಆರೋಗ್ಯವನ್ನು ವಿಚಾರಿಸಿದ್ದಾರೆ.
ಇದೀಗ ಘಟನೆಗೆ ಶಾಲೆಯ ಅಡುಗೆ ಸಿಬ್ಬಂದಿಯ ನಿರ್ಲಕ್ಷ್ಯ ಎಂಬ ಆರೋಪ ಕೇಳಿಬಂದಿದೆ. ವಿದ್ಯಾರ್ಥಿಗಳ ಪೋಷಕರು ಶಾಲೆ ಹಾಗೂ ಅಡುಗೆ ಸಿಬ್ಬಂದಿಯ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.