newsics.com
ಬೆಂಗಳೂರು : ಸಿ.ಪಿ.ಯೋಗೇಶ್ವರ್ ಪರ ಪ್ರಚಾರ ಮಾಡುತ್ತಾ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದರು ಜಮೀರ್ ಅಹ್ಮದ್ ಖಾನ್ ವಿರುದ್ದ ಕಂಪ್ಲೇಂಟ್ ದಾಖಲಾಗಿದೆ.
ಏಯ್ ಕುಮಾರಸ್ವಾಮಿ ನಿನಗೆ ಮುಸಲ್ಮಾನರ ಮತ ಬೇಕಾ? ಬಿಜೆಪಿಗೆ ಹೋಗಿ ಮುಸಲ್ಮಾನರನ್ನು ಖರೀದಿ ಮಾಡುತ್ತೀಯಾ? ನಿನ್ನ ರೇಟು ಹೇಳು. ಮುಸಲ್ಮಾನರೇ ಒಂದೊಂದು ಪೈಸೆ ಹಾಕಿ ನಿನ್ನಿಡೀ ಕುಟಂಬವನ್ನೇ ಖರೀದಿ ಮಾಡುತ್ತಾರೆ ಎಂದು ಏಕವಚನದಲ್ಲೇ ದಾಳಿ ನಡೆಸಿದ್ರು ಜಮೀರ್. ಎಚ್.ಡಿ ಕುಮಾರಸ್ವಾಮಿ ಅವರನ್ನು ನಿಂದಿಸಿದ್ದ ಜಮೀರ್ ವಿರುದ್ಧ ಇಡೀ ರಾಜ್ಯಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿದೆ. ಈ ಬೆನ್ನಲ್ಲೇ ಎಚ್ಚೆತ್ತ ಜಮೀರ್ ಅವರು, ನನ್ನ ಹೇಳಿಕೆಯಿಂದ ಯಾರಿಗಾದರೂ ಬೇಸರವಾಗಿದ್ದರೆ ಕ್ಷಮೆಯಾಚಿಸುತ್ತೇನೆ ಎಂದಿದ್ದಾರೆ.
ಬಿಜೆಪಿಯವರಿಗಿಂತ ಕಾಲಾ ಕುಮಾರಸ್ವಾಮಿ ಡೇಂಜರ್ ಅನ್ನೋ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಜಮೀರ್ ವಿರುದ್ಧ ದೂರು ನೀಡಲಾಗಿದೆ. ವಕೀಲ RLN ಮೂರ್ತಿ ಅವರು ವಿಧಾನಸೌಧ ಠಾಣೆಗೆ ದೂರು ನೀಡಿದ್ದು, ಜಮೀರ್ ವಿರುದ್ದ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಜಾತಿ, ಧರ್ಮಗಳ ಮಧ್ಯೆ ದ್ವೇಷ ಭಾವನೆ ಬಿತ್ತುವ ಪ್ರಯತ್ನ ಜಮೀರ್ ಅವರದ್ದು ಎಂದು ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ