newsics.com
ಪೇಶಾವರ: ಪಾಕಿಸ್ತಾನದ ಗಿಲ್ಗಿಟ್-ಬಾಲ್ಟಿಸ್ತಾನ್ ಪ್ರದೇಶದಲ್ಲಿ ಮದುವೆ ಅತಿಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಸಿಂಧೂ ನದಿಗೆ ಬಿದ್ದ ಪರಿಣಾಮ ಕನಿಷ್ಠ 16 ಜನರು ಸಾವನ್ನಪ್ಪಿದ್ದಾರೆ.
ಓರ್ವ ಮಹಿಳೆ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಒಟ್ಟು 22 ಜನ ಮುಳುಗಿದ್ದು, ಓರ್ವನನ್ನು ರಕ್ಷಿಸಲಾಗಿದೆ.
ಡಯಾಮರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಬಸ್ ಅಸ್ಟೋರ್ನಿಂದ ಪಂಜಾಬ್ನ ಚಕ್ವಾಲ್ ಜಿಲ್ಲೆಗೆ ಪ್ರಯಾಣಿಸುತ್ತಿದ್ದಾಗ ತೇಲ್ಚಿ ಸೇತುವೆಯಿಂದ ನದಿಗೆ ಬಿದ್ದಿದೆ ಎಂದು ಡಾನ್ ಪತ್ರಿಕೆ ವರದಿ ಮಾಡಿದೆ.
16 ಶವಗಳನ್ನು ಶೋಧಿಸಕೊಳ್ಳಲಾಗಿದ್ದು, ಉಳಿದ ಸಂತ್ರಸ್ತರಿಗಾಗಿ ಶೋಧ ಪ್ರಯತ್ನಗಳು ನಡೆಯುತ್ತಿವೆ ಎಂದು ಡಯಾಮರ್ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಶೇರ್ ಖಾನ್ ಖಚಿತಪಡಿಸಿದ್ದಾರೆ.
ಬಸ್‌ನಲ್ಲಿದ್ದ ವಧುವಿಗೂ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ಹೇಳಿದರು.
22 ಜನರು ಮುಳುಗಿದ್ದು, ಒಬ್ಬ ವ್ಯಕ್ತಿಯನ್ನು ರಕ್ಷಿಸಲಾಗಿದೆ ಎಂದು ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ.
ಇದೇ ರೊಮ್ಯಾನ್ಸ್‌ಗೆ ಅತ್ಯುತ್ತಮ ಸಮಯ… ಈ ವೇಳೆ ಭಯವಿಲ್ಲದೆ ನೀವು ‘ಒಂದಾಗಬಹುದು’!
ರಾಜ್ಯದ 6 ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಲ್ಲಿ ಒಬ್ಬರೇ ಶಿಕ್ಷಕರು! 530 ಶಾಲೆಗಳಲ್ಲಿ ಮಕ್ಕಳೇ ಇಲ್ಲ!