Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದ 3 ಕ್ಷೇತ್ರಗಳಿಗಿಂದು ಉಪ‌ ಚುನಾವಣೆ: 45 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
ಕರ್ನಾಟಕಪ್ರಮುಖ

ರಾಜ್ಯದ 3 ಕ್ಷೇತ್ರಗಳಿಗಿಂದು ಉಪ‌ ಚುನಾವಣೆ: 45 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

Share
2 Min Read
SHARE

newsics.com

ಬೆಂಗಳೂರು: ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷಗಳಾಗಿರುವ ಬಿಜೆಪಿ-ಜೆಡಿಎಸ್ ನಡುವೆ ಜಿದ್ದಾಜಿದ್ದಿಗೆ ಕಾರಣವಾಗಿರುವ ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಗೆ ಮತದಾನ ಪ್ರಕ್ರಿಯೆ ಬುಧವಾರ ಆರಂಭವಾಗಿದ್ದು, 45 ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆ ಸೇರಲಿದೆ.

ಬೆಳಗ್ಗೆ 7ಕ್ಕೆ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಸಂಜೆ 6 ಗಂಟೆಯವರೆಗೆ ನಡೆಯಲಿದೆ. ಶಾಂತಿಯುತ ಮತದಾನಕ್ಕೆ 3 ಕ್ಷೇತ್ರಗಳಲ್ಲಿ ಜಿಲ್ಲಾಡಳಿತಗಳು ಸಕಲ ಸಿದ್ಧತೆಯ ಜತೆಗೆ ಸೂಕ್ತ ಬಂದೋಬಸ್ತ್ ಕೈಗೊಂಡಿವೆ.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಪ್ರಮುಖವಾಗಿ ಕಾಂಗ್ರೆಸ್ನಿಂದ ಸಿ.ಪಿ.ಯೋಗೇಶ್ವರ ಮತ್ತು ಎನ್ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಮಧ್ಯೆ ನೇರ ಪೈಪೋಟಿ ಏರ್ಪಟ್ಟಿದೆ. ಈ ಕ್ಷೇತ್ರ ವ್ಯಾಪ್ತಿಯಲ್ಲಿ 276 ಮತಗಟ್ಟೆಗಳಿದ್ದು, 62 ನಗರ ವ್ಯಾಪ್ತಿ ಹಾಗೂ 214 ಗ್ರಾಮಾಂತರ ಪ್ರದೇಶದಲ್ಲಿ ಸ್ಥಾಪಿಸಲಾಗಿದೆ.
ಚನ್ನಪಟ್ಟಣದಲ್ಲಿ ಒಟ್ಟು 2,32,949 ಮತದಾರರಿದ್ದು, ಈ ಪೈಕಿ 1,12,324 ಪುರುಷ ಮತದಾರರು, 1,20,617 ಮಹಿಳಾ ಮತದಾರರಿದ್ದಾರೆ. 8,338 ಯುವ ಮತದಾರರು ಹಕ್ಕು ಚಲಾಯಿಸಲಿದ್ದಾರೆ.
ಚನ್ನಪಟ್ಟಣದಲ್ಲಿ ಒಕ್ಕಲಿಗ ಮತಗಳ ಪ್ರಾಬಲ್ಯವಿದೆ. 1.05 ಲಕ್ಷದಷ್ಟಿರುವ ಒಕ್ಕಲಿಗ ಮತಗಳೇ ನಿರ್ಣಾಯಕವಾಗಿದೆ. 40 ಸಾವಿರ ಪರಿಶಿಷ್ಟ ಪಂಗಡ, 32 ಸಾವಿರ ಮುಸ್ಲಿಂ, 21 ಸಾವಿರ ಹಿಂದುಳಿದ ವರ್ಗ, 8 ಸಾವಿರ ಕುರುಬ, 10 ಸಾವಿರಕ್ಕೂ ಹೆಚ್ಚು ಇತರೆ ಮತಗಳಿವೆ.

ಶಿಗ್ಗಾಂವಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪುತ್ರ ಭರತ್‌ ಬೊಮ್ಮಾಯಿ ಕಣದಲ್ಲಿದರೆ, ಕಾಂಗ್ರೆಸ್‌ನಿಂದ ಯಾಸೀರ್‌ ಖಾನ್‌ ಪಠಾಣ್ ಸೇರಿ ಅಂತಿಮ ಕಣದಲ್ಲಿರುವ 8 ಅಭ್ಯರ್ಥಿಗಳಿದ್ದಾರೆ. ಇಲ್ಲೂ ಎರಡು ಲಕ್ಷಕ್ಕೂ ಹೆಚ್ಚು ಮತದಾರರಿದ್ದಾರೆ.

ಶಿಗ್ಗಾಂವಿಯಲ್ಲಿ ಒಟ್ಟು 2,37,525 ಮತದಾರರಿದ್ದಾರೆ. ಈ ಪೈಕಿ ಪುರುಷರು 1,21,443 ಹಾಗೂ ಮಹಿಳೆಯರು 1,16,76 ಮತಗಳಿವೆ. ಒಟ್ಟು 241 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗಿದೆ. ಈ ಪೈಕಿ 92 ಮತಗಟ್ಟೆಗಳು ಸೂಕ್ಷ್ಮವೆಂದು ಗುರ್ತಿಸಲಾಗಿದೆ. ಓರ್ವ ಎಎಸ್ಪಿ, ನಾಲ್ವರು ಡಿವೈಎಸ್ಪಿ, 12 ಸಿಪಿಐ, 24 ಪಿಎಸ್ಐ, 68 ಎಎಸ್ಐ ಸೇರಿ 716 ಸಿಬ್ಬಂದಿಯನ್ನ ಭದ್ರತೆಗೆ ನಿಯೋಜನೆ ಮಾಡಲಾಗಿದೆ.

ಶಿಗ್ಗಾಂವಿಯಲ್ಲಿ ಲಿಂಗಾಯತ ಮತಗಳೇ ನಿರ್ಣಾಯಕವಾಗಿವೆ. ಲಿಂಗಾಯತ 85 ಸಾವಿರ, ಮುಸ್ಲಿಂ 58 ಸಾವಿರ, ಕುರುಬ 27 ಸಾವಿರ, ಎಸ್ಸಿ, ಎಸ್ಟಿ 52 ಸಾವಿರ, ಇತರೆ 15 ಸಾವಿರ ಮತಗಳಿವೆ.

ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಅನ್ನಪೂರ್ಣ ತುಕಾರಾಂ ಹಾಗೂ ಬಿಜೆಪಿಯ ಬಂಗಾರು ಹನುಮಂತು ನಡುವೆ ನೇರಾ ಹಣಾಹಣಿ ನಡೆದಿದೆ. ಒಟ್ಟಾರೆ 7 ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿದ್ದಾರೆ.

ಸಂಡೂರಿನಲ್ಲಿ ಒಟ್ಟು 2,36,100 ಮತದಾರರಿದ್ದು, ಈ ಪೈಕಿ 1,18,282 ಮಹಿಳಾ ಮತದಾರರು, 1,17,789 ಪುರುಷ ಮತದಾರರಿದ್ದಾರೆ. ಒಟ್ಟು 253 ಮತಗಟ್ಟೆ ಸ್ಥಾಪನೆ ಮಾಡಲಾಗಿದ್ದು, 55 ಸೂಕ್ಷ್ಮ ಮತಗಟ್ಟೆಗಳಿವೆ.

ಸಂಡೂರು ಎಸ್ಟಿ ಮೀಸಲು ಕ್ಷೇತ್ರವಾಗಿದೆ. ಎಸ್ಟಿ ಮತಗಳೇ ನಿರ್ಣಾಯಕ ಮತಗಳಾಗಿವೆ. ಎಸ್ಟಿ 68 ಸಾವಿರ, ಎಸ್ಸಿ 40 ಸಾವಿರ, ಲಿಂಗಾಯಿತ 38 ಸಾವಿರ, ಕುರುಬ ಮತಗಳು 34 ಸಾವಿರ, ಮುಸ್ಲಿಂ ಮತಗಳು 20 ಸಾವಿರ, ಇತರೆ 40 ಸಾವಿರ ಮತಗಳಿವೆ.

ನದಿಗೆ ದಿಬ್ಬಣದ ಬಸ್ ಉರುಳಿ 16 ಮಂದಿ ಸಾವು, ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ

ಇದೇ ರೊಮ್ಯಾನ್ಸ್‌ಗೆ ಅತ್ಯುತ್ತಮ ಸಮಯ… ಈ ವೇಳೆ ಭಯವಿಲ್ಲದೆ‌ ನೀವು ‘ಒಂದಾಗಬಹುದು’!

ರಾಜ್ಯದ 6 ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಲ್ಲಿ ಒಬ್ಬರೇ ಶಿಕ್ಷಕರು! 530 ಶಾಲೆಗಳಲ್ಲಿ‌ ಮಕ್ಕಳೇ ಇಲ್ಲ!

ಪದೇ ಪದೇ ಕಾಫಿ ಕುಡಿದರೆ ಕಣ್ಣಿನ ದೃಷ್ಟಿ ಹಾಳಾಗಬಹುದು..ಹುಷಾರ್

TAGGED:By-election today for 3 constituencies of the state: fate of 45 candidates decided
Share This Article
Facebook Twitter Copy Link Print
Previous Article ಮುಂದಿನ ಐದು ದಿನಗಳ ಕಾಲ ಭಾರೀ ಮಳೆ!; ಕರ್ನಾಟಕದ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್
Next Article ನ. 15ರಿಂದ ಕಡಲೆಕಾಯಿ ಪರಿಷೆ, 8 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆ

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?