newsics.com
ಬೆಂಗಳೂರು: ಆಭರಣ ಪ್ರಿಯರಿಗೆ ಇಂದು ಬೆಳ್ಳಂಬೆಳಗ್ಗೆ ಸಿಹಿಸುದ್ದಿ ಸಿಕ್ಕಿದ್ದು, ಸತತ ನಾಲ್ಕನೇ ದಿನವೂ ಚಿನ್ನ, ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ.
ಚಿನ್ನದ ಬೆಲೆ ದಿನದಿಂದ ದಿನಕ್ಕೆ ಭಾರೀ ಪ್ರಮಾಣದಲ್ಲಿ ಕುಸಿಯುತ್ತಿದೆ. ನಿನ್ನೆಗೆ ಹೋಲಿಸಿದರೆ ಇಂದು 2000 ರೂಪಾಯಿ ಇಳಿಕೆಯಾಗಿದೆ.
24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ಇಂದು 77650 ರೂ.ಗೆ ಇಳಿಕೆಯಾಗಿದೆ. ಹಾಗೂ 22ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 71650 ರೂ.ಗೆ ಕುಸಿದಿದೆ. ಕಳೆದ ನಾಲ್ಕು ದಿನಗಳಲ್ಲಿ ಚಿನ್ನದ ಬೆಲೆ ನೋಡಿದರೆ ಸುಮಾರು 3 ಸಾವಿರ ರೂಪಾಯಿ ಇಳಿಕೆಯಾಗಿದೆ. ಚಿನ್ನದ ಬೆಲೆ ಒಂದು ಹಂತದಲ್ಲಿ ಸಾರ್ವಕಾಲಿಕ ದಾಖಲೆಯ ಗರಿಷ್ಠ 82,000 ರೂ. ಅದಕ್ಕೆ ಹೋಲಿಸಿದರೆ ಚಿನ್ನದ ಬೆಲೆಯಲ್ಲಿ ಸುಮಾರು 5 ಸಾವಿರ ರೂಪಾಯಿ ಇಳಿಕೆಯಾಗಿದೆ. ನಿನ್ನೆ 78,000 ಇದ್ದ ಚಿನ್ನದ ಬೆಲೆ ಈಗ 77,000 ರೂ.ಗೆ ಕುಸಿದಿದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ
• 22 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ: 70,450 ರೂ
• 24 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ: 76,850 ರೂ
• 18 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ: 57,640 ರೂ
• ಬೆಳ್ಳಿ ಬೆಲೆ 10 ಗ್ರಾಂಗೆ: 92.90 ರೂ
ಬೆಂಗಳೂರಿನಲ್ಲಿ ಚಿನ್ನ ಬೆಳ್ಳಿ ಬೆಲೆ
• 22 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ: 70,450 ರೂ
• 24 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ: 76,850 ರೂ
• ಬೆಳ್ಳಿ ಬೆಲೆ 10 ಗ್ರಾಂಗೆ: 92.90 ರೂ