newsics.com
ರಾಮನಗರ: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಾದ ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರಿನಲ್ಲಿ ಉಪಚುನಾವಣೆ ಮತದಾನ ಬಿರುಸಿನಿಂದ ನಡೆಯುತ್ತಿದೆ. ಮತದಾರರನ್ನು ಸೆಳೆಯಲು ವಿವಿಧ ರೀತಿಯ ಸಾಂಪ್ರದಾಯಿಕ ಮತಗಟ್ಟೆಗಳನ್ನು ತೆರೆಯಲಾಗಿದ್ದು, ಮತದಾರರನ್ನು ಆಕರ್ಷಿಸುತ್ತಿದೆ.
ಅದರಲ್ಲಿಯೂ ಚೆನ್ನಪಟ್ಟಣದಲ್ಲಿ ವಿವಿಧ ರೀತಿಯ ಸಾಂಪ್ರದಾಯಿಕ ಮತಗಟ್ಟೆಗಳು ಕಣ್ಮನಸೆಳೆಯುತ್ತಿವೆ. ವಿಶೇಷವಾಗಿ ‘ಗೊಂಬೆ ಮತಗಟ್ಟೆ’ ಮತದಾರರನ್ನು ತನ್ನತ್ತ ಆಕರ್ಷಿಸುತ್ತಿದೆ.
ಇನ್ನು ಚೆನ್ನಪಟ್ಟಣ ಕ್ಷೇತ್ರ ಗೊಂಬೆಗಳಿಗೆ ವಿಶ್ವ ವಿಖ್ಯಾತಿ ಪಡೆದಿದೆ. ಇಲ್ಲಿನ ಗೊಂಬೆಗಳಿಗೆ ಭಾರಿ ಬೆಡಿಕೆ. ಹೀಗಾಗಿ ಚುನಾವಣಾ ಆಯೋಗ ವಿಶೇಷವಾಗಿ ಗೊಂಬೆ ಮತಗಟ್ಟೆ ನಿರ್ಮಿಸಿದೆ. ಚನ್ನಪಟ್ಟಣದ ಕೋಟೆ ಬಡವಾಣೆಯಲ್ಲಿ ವಿಶೇಷ ಸಾಂಪ್ರದಾಯಿಕ ಗೊಂಬೆ ಮತಗಟ್ಟೆ ನಿರ್ಮಿಸಲಾಗಿದೆ. ಗೊಂಬೆ ಮತಗಟ್ಟೆಗಳು ಮತದಾರರನ್ನು ಕೈಬೀಸಿ ಕರೆಯುತ್ತಿದ್ದು, ಮತದಾರರು ಮತಗಟ್ಟೆಗೆ ಆಗಮಿಸಿ ಮತದಾನ ಮಾಡುತ್ತಿದ್ದಾರೆ.