newsics.com
ಕಪ್ಪು ಮಗು ಹುಟ್ಟಿದ್ದರಿಂದ ಹೆಂಡತಿಯ ಚಾರಿತ್ರ್ಯದ ಮೇಲೆ ಅನುಮಾನಗೊಂಡ ಗಂಡ ಆಕೆಯಿಂದ ಡೈವೋರ್ಸ್ ಕೇಳಿದ್ದಾನೆ. ಅಲ್ಲದೆ, ಡಿಎನ್‌ಎ ಪರೀಕ್ಷೆಗೆ ಒತ್ತಾಯಿಸಿರುವ ಘಟನೆ ಚೀನಾದಲ್ಲಿ ನಡೆದಿದೆ.
1 ತಿಂಗಳ ಹಿಂದೆ 30 ವರ್ಷದ ಮಹಿಳೆ ಸಿ-ಸೆಕ್ಷನ್ ಮೂಲಕ ಮಗುವಿಗೆ ಜನ್ಮ ನೀಡಿದ್ದಳು. ಆದರೆ ಅವರಿಗೆ ಕಪ್ಪು ಬಣ್ಣದ ಮಗು ಹುಟ್ಟಿತ್ತು. ಆಕೆ ಮತ್ತು ಆಕೆಯ ಗಂಡ ಬಿಳಿ ಬಣ್ಣದವರಾಗಿದ್ದು, ಕಪ್ಪು ಮಗು ಹೇಗೆ ಹುಟ್ಟಿತು ಎಂದು ಆಕೆಯ ಪತಿ ಆಘಾತಕ್ಕೊಳಗಾದ. ಇದೇ ಕಾರಣವನ್ನಿಟ್ಟುಕೊಂಡು ಆತ ವಿಚ್ಛೇದನ ಕೋರಿದ್ದಾನೆ.
ಈ ಘಟನೆಯನ್ನು ಮಹಿಳೆ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದು, ಪರಿಸ್ಥಿತಿಯನ್ನು ಹೇಗೆ ಎದುರಿಸಬೇಕೆಂದು ಸಲಹೆ ಕೇಳಿದ್ದಾರೆ.
ಮಗುವಿನ ಕಪ್ಪು ಮೈಬಣ್ಣದಿಂದ ತನಗೂ ಆಶ್ಚರ್ಯವಾಯಿತು ಎಂದು ಆಕೆ ಒಪ್ಪಿಕೊಂಡಿದ್ದಾಳೆ. ಆದರೆ, ಮಗುವಿನ ಬಣ್ಣದ ಕಾರಣಕ್ಕೆ ನಾನು ಹೆತ್ತ ಮಗುವನ್ನು ಕೈಬಿಡುವುದಿಲ್ಲ ಎಂದು ಆಕೆ ಸ್ಪಷ್ಟಪಡಿಸಿದ್ದಾಳೆ. ಆಕೆಯ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನೆಟ್ಟಿಗರಲ್ಲಿ ಚರ್ಚೆಗೆ ಗ್ರಾಸವಾಗಿದೆ.