newsics.com
ಬೆಂಗಳೂರು : ಮದುವೆಯಾಗುವಂತೆ ಅಪ್ರಾಪ್ತ ಬಾಲಕಿಯೊಬ್ಬಳಿಗೆ ಸೋದರಮಾವನೊಬ್ಬ ಕಿರುಕುಳ ನೀಡುತ್ತಿದ್ದು, ಇದರಿಂದ ಮನನೊಂದ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಬಾಗಲಕುಂಟೆಯಲ್ಲಿ ನಡೆದಿದೆ.
28 ವರ್ಷದ ಸೋದರಮಾವ 16 ವರ್ಷದ ಅಪ್ರಾಪ್ತ ಬಾಲಕಿಯೊಂದಿಗೆ ಸದಾ ನನ್ನನ್ನು ಮದುವೆಯಾಗು ಎಂದು ಪೀಡಿಸುತ್ತಿದ್ದ, ಇದರಿಂದ ಮನನೊಂದ ಬಾಲಕಿ ಆತ್ಮಹತ್ಯೆಗೂ ಮುನ್ನ ವಾಟ್ಸ್ ಆಯಪ್ ನಲ್ಲಿ ಸ್ಟೇಟಸ್ ಹಾಕಿ ನನ್ನ ಸಾವಿಗೆ ಸೋದರ ಮಾವನೇ ಕಾರಣ ಎಂದು ಬರೆದುಕೊಂಡಿದ್ದಾರೆ.
ಇನ್ನು ಈ ಘಟನೆಗೆ ಸಂಬಂಧಪಟ್ಟಂತೆ ಲೈಂಗಿಕ ದೌರ್ಜನ್ಯ ಎಸಗಿ, ಹಲ್ಲೆ ನಡೆಸಿದ್ದಾನೆ ಎಂದು ಮೃತ ಬಾಲಕಿಯ ತಾಯಿ ದೂರು ನೀಡಿದ್ದು, ಈ ಹಿನ್ನಲೆ ಆರೋಪಿ ಸೋದರಮಾವನನ್ನು ಸ್ಥಳೀಯ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಈ ಸಂಬಂಧ ಬಾಗಲಕುಂಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.