newsics.com
ಬೆಂಗಳೂರು: ನಡುರಸ್ತೆಯಲ್ಲೇ ಕಾರು ಹೊತ್ತಿ ಉರಿದ ಘಟನೆ ಬೆಂಗಳೂರಿನ ಗೋಪಸಂದ್ರ ಗೇಟ್ ಬಳಿ ನಡೆದಿದೆ.
ಕಾರಿನ ಎಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ ಕಾರಿನ ತುಂಬಾ ವ್ಯಾಪಿಸಿ ರಸ್ತೆಯಲ್ಲಿ ಕಾರು ಹೊತ್ತಿ ಉರಿದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾರೆ. ಆನೇಕಲ್‌ನ ಗೋಪಸಂದ್ರದಿಂದ ಮುತ್ತಾನಲ್ಲೂರು ಕಡೆಗೆ ಹೋಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.
ಘಟನೆಯಿಂದಾಗಿ ದೊಮ್ಮಸಂದ್ರ ರಸ್ತೆ ಕಿಲೋಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟಾಗಿತ್ತು. ಇನ್ನು ಕೂಡಲೇ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.