Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಬಿಗ್ ಬಾಸ್ ಮನೆಯಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಚೈತ್ರಾ ಕುಂದಾಪುರ, ಆಸ್ಪತ್ರೆಗೆ ದಾಖಲು
ಪ್ರಮುಖಮನರಂಜನೆ

ಬಿಗ್ ಬಾಸ್ ಮನೆಯಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಚೈತ್ರಾ ಕುಂದಾಪುರ, ಆಸ್ಪತ್ರೆಗೆ ದಾಖಲು

Share
2 Min Read
SHARE

newsics.com
ಬಿಗ್ ಬಾಸ್ ಆಟದಲ್ಲಿ ಕಳಪೆ ಯಾರು ಎಂಬುದನ್ನು ಆಯ್ಕೆ ಮಾಡುವುದಕ್ಕೂ ಕೆಲವೇ ಗಂಟೆಗಳ ಮುನ್ನ ಚೈತ್ರಾ ಕುಂದಾಪುರ ಅವರು ಕುಸಿದು ಬಿದ್ದಿದ್ದಾರೆ. ಎಷ್ಟೇ ಪ್ರಯತ್ನಿಸಿದರೂ ಅವರಿಗೆ ಪ್ರಜ್ಞೆ ಬರಲಿಲ್ಲ. ನಂತರ ಚಿಕಿತ್ಸೆಗಾಗಿ ಅವರನ್ನು ಕರೆದುಕೊಂಡು ಹೋಗಲಾಗಿದೆ.

ಜೋಡಿ ಟಾಸ್ಕ್ ಮುಗಿದ ಬಳಿಕ ಚೈತ್ರಾ ಕುಂದಾಪುರ ಅವರು ಕುಸಿದು ಬಿದ್ದಿದ್ದಾರೆ. ಬಾತ್ರೂಮ್ ಏರಿಯಾದಲ್ಲಿ ಒಬ್ಬರೇ ಇದ್ದಾಗ ಅವರು ಪ್ರಜ್ಞೆ ತಪ್ಪಿದ್ದಾರೆ. ಇದನ್ನು ಗಮನಿಸಿದ ಬಿಗ್ ಬಾಸ್ ತಕ್ಷಣ ಚೈತ್ರಾ ನೆರವಿಗೆ ಧಾವಿಸುವಂತೆ ಮೋಕ್ಷಿತಾ ಪೈ ಮತ್ತು ಗೌತಮಿ ಜಾಧವ್ ಅವರನ್ನು ಕಳಿಸಿದ್ದಾರೆ. ಅವರಿಬ್ಬರೂ ಓಡಿ ಬಂದು ನೋಡಿದಾಗ ಚೈತ್ರಾ ಕುಂದಾಪುರ ಅವರು ನೆಲದ ಮೇಲೆ ಪ್ರಜ್ಞೆ ತಪ್ಪಿದ ಸ್ಥಿತಿಯಲ್ಲಿ ಬಿದ್ದಿದ್ದರು. ಬಳಿಕ ಬಿಗ್ ಬಾಸ್ ಮನೆಯ ಇನ್ನುಳಿದ ಸದಸ್ಯರು ಕೂಡ ಓಡೋಡಿ ಬಂದರು. ಎಷ್ಟೇ ಪ್ರಯತ್ನಿಸಿದರೂ ಕೂಡ ಚೈತ್ರಾ ಅವರಿಗೆ ಪ್ರಜ್ಞೆ ಬಂದಿಲ್ಲ.

ಪ್ರಜ್ಞೆ ತಪ್ಪಿ ಬಿದ್ದಿದ್ದ ಚೈತ್ರಾ ಕುಂದಾಪುರ ಅವರ ಮುಖದ ಮೇಲೆ ನೀರು ಚಿಮುಕಿಸಲಾಯಿತು. ಆದರೂ ಅವರು ಎಚ್ಚರಗೊಳ್ಳಲಿಲ್ಲ. ಕೂಡಲೇ ಅವರನ್ನು ಕನ್ಫೆಷನ್ ರೂಮಿಗೆ ಕರೆದುಕೊಂಡು ಬರುವಂತೆ ಬಿಗ್ ಬಾಸ್ ಆದೇಶಿಸಿದರು.

ತ್ರಿವಿಕ್ರಮ್ ಅವರು ಚೈತ್ರಾ ಅವರನ್ನು ಎತ್ತಿಕೊಂಡು ಬಂದು ಕನ್ಫೆಷನ್ ರೂಮ್ನಲ್ಲಿ ಮಲಗಿಸಿದರು. ಎತ್ತಿಕೊಂಡು ಬರುವಾಗ ಚೈತ್ರಾ ಪರಿಸ್ಥಿತಿ ಗಂಭೀರವಾಗಿದ್ದಂತೆ ಕಾಣಿಸಿದೆ.

ಬಿಗ್ ಬಾಸ್ ಮನೆಯಲ್ಲಿ ಪ್ರತಿ ದಿನವೂ ಒಂದಲ್ಲ ಒಂದು ಟಾಸ್ಕ್ ಇರುತ್ತದೆ. ಹಾಗಾಗಿ ಎನರ್ಜಿ ಲೆವೆಲ್ ಕಾಪಾಡಿಕೊಳ್ಳುವುದು ಮುಖ್ಯ. ಚೈತ್ರಾ ಅವರು ಹೀಗೆ ಏಕಾಏಕಿ ಪ್ರಜ್ಞೆ ತಪ್ಪಿ ಬೀಳಲು ಕಾರಣ ಆಗಿದ್ದು ಏನು ಎಂಬುದು ಇನ್ನಷ್ಟೇ ತಿಳಿಯಬೇಕಿದೆ. ಕಳಪೆ ಮತ್ತು ಉತ್ತಮ ಯಾರು ಎಂಬುದನ್ನು ಆಯ್ಕೆ ಮಾಡುವ ಪ್ರಕ್ರಿಯೆಯಲ್ಲಿ ಚೈತ್ರಾ ಅವರು ಕಾಣಿಸಿಕೊಳ್ಳಲಿಲ್ಲ. ಅವರನ್ನು ಈ ಪ್ರತಿಕ್ರಿಯೆಯಿಂದಲೇ ಹೊರಗೆ ಇಡಲಾಗಿದೆ.

ಚೈತ್ರಾ ಕುಂದಾಪುರ ಮತ್ತು ಶಿಶಿರ್ ನಡುವೆ ದೊಡ್ಡ ಜಗಳ ಆಗಿತ್ತು. ಆಗ ಚೈತ್ರಾ ಮೇಲೆ ಶಿಶಿರ್ ಅವರು ಕೂಗಾಡಿದ್ದರು. ಅನೇಕರ ಜತೆ ಚೈತ್ರಾ ಕಿರಿಕ್ ಮಾಡಿಕೊಂಡಿದ್ದಾರೆ. ಅನಗತ್ಯವಾಗಿ ಜೋರು ಧ್ವನಿಯಲ್ಲಿ ಮಾತನಾಡುವ ಮೂಲಕ ಅವರು ಕಿರಿಕ್‌ಗಳನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಹೀಗಾಗಿ ನಾಮಿನೇಷನ್ ವೇಳೆ ಅವರು ಹಲವರ ಟಾರ್ಗೆಟ್ ಆಗುತ್ತಿದ್ದಾರೆ.

ಹಾಲಿನಲ್ಲಿ ಒಂದು ಚಿಟಿಕೆ ಅರಿಶಿನ ಹಾಕಿ ಕುಡಿದರೆ ಒಳ್ಳೆಯದು..! ಆದರೆ ಈ ಕಾಯಿಲೆ ಇರೋರಿಗೆ ಇದು ವಿಷ

ಬೆಂಗಳೂರಿನ ಮಹಿಳೆಯನ್ನು ಮದುವೆಯಾದ ಸ್ವಾಮೀಜಿಗೆ ಮಠದಿಂದ ಗೇಟ್ ಪಾಸ್

TAGGED:Chaitra Kundapurwas admitted to the hospitalwho fell unconscious in the Bigg Boss house
Share This Article
Facebook Twitter Copy Link Print
Previous Article ಹಾಲಿನಲ್ಲಿ ಒಂದು ಚಿಟಿಕೆ ಅರಿಶಿನ ಹಾಕಿ ಕುಡಿದರೆ ಒಳ್ಳೆಯದು..! ಆದರೆ ಈ ಕಾಯಿಲೆ ಇರೋರಿಗೆ ಇದು ವಿಷ
Next Article ಹಾರಾಡುತ್ತಿದ್ದ ಅಪಾಚೆ ಹೆಲಿಕಾಪ್ಟರ್‌ನಲ್ಲೇ ಯೋಧರ ರಾಸಲೀಲೆ, ಇಬ್ಬರ ಬಂಧನ

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?