newsics.com
ತುಮಕೂರು: ಹುಡುಗಿ ವಿಚಾರಕ್ಕೆ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.
ಮನೆಯಲ್ಲಿ ಊಟ ಮಾಡುತ್ತಿದ್ದವನನ್ನು ಕರೆಸಿಕೊಂಡು ಕೊಲೆ ಮಾಡಿದ್ದಾರೆ. ರಿಹಾನ್ ಪಾಷಾ ಕೊಲೆಯಾದ ಯುವಕ ಎಂದು ತಿಳಿದುಬಂದಿದೆ.
ಮಾತನಾಡಬೇಕಿದೆ ಬಾ ಎಂದು ಕರೆಸಿಕೊಂಡು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ. ಮರಳೂರು ಜಿಲ್ಲೆಯಲ್ಲಿ ಅಪರಾಧ ಕೃತ್ಯಗಳು ಹೆಚ್ಚಾಗುತ್ತಿದ್ದರೂ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ತುಮಕೂರಿನ ತಿಲಕ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.