newsics.com
ಬೆಂಗಳೂರು: ರೈತರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಹೌದು, ಸಹಾಯಧನದೊಂದಿಗೆ ಕೃಷಿ ಯಂತ್ರೋಪಕರಣಗಳನ್ನು ಖರೀದಿಸಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಸಾಮಾನ್ಯ ವರ್ಗದ ರೈತರಿಗೆ ಶೇ.50 ರ ರಿಯಾಯಿತಿಯಲ್ಲಿ ಮತ್ತು ಪರಿಶಿಷ್ಟ ಜಾತಿ ಮತ್ತು ವರ್ಗದ ರೈತರಿಗೆ ಶೇ.90 ರ ರಿಯಾಯಿತಿಯಲ್ಲಿ ಟ್ರಾಕ್ಟರ್ ಖರೀದಿಗೆ ಅರ್ಜಿ ಆಹ್ವಾನಿಸಲಾಗಿದೆ.
ಇನ್ನು ಆಸಕ್ತ ರೈತರು ಪಹಣಿ(ಆರ್‍ಟಿಸಿ), ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ ಜೆರಾಕ್ಸ್, ಎರಡು ಭಾವಚಿತ್ರ, 100 ರೂಪಾಯಿಯ ಬಾಂಡ್ ಪೇಪರ್‌ನೊಂದಿಗೆ ಸ್ಥಳೀಯ ಹೋಬಳಿಯಲ್ಲಿರುವ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಎಂದು ಸರ್ಕಾರ ತಿಳಿಸಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರ ಮತ್ತು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು.
ಕೃಷಿ ಭಾಗ್ಯ ಯೋಜನೆಗೆ ರೈತರು ಒಟ್ಟು ಸಾಗುವಳಿ ಕ್ಷೇತ್ರದ ಒಂದು ಸರ್ವೇ ನಂಬರ್‌ನಲ್ಲಿ ಕನಿಷ್ಠ 1 ಎಕರೆ ಭೂಮಿ ಹೊಂದಿರಬೇಕು. ಹಿಂದಿನ ಸಾಲುಗಳಲ್ಲಿ ಕೃಷಿ ಭಾಗ್ಯ ಯೋಜನೆ ಅಥವಾ ಇನ್ನಾವುದೇ ಯೋಜನೆಯಡಿ ಕೃಷಿ ಹೊಂಡ ಫಲಾನುಭವಿಯಾಗಿರುವ ರೈತರು ಈ ಯೋಜನೆಗೆ ಅರ್ಹತೆ ಹೊಂದಿರುವುದಿಲ್ಲ, ಇದನ್ನು ಕೆ ಕಿಸಾನ್ ಪೋರ್ಟಲ್‍ನಲ್ಲಿ ಪರಿಶೀಲಿಸಿ ಖಾತರಿಪಡಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರ ಮತ್ತು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು.