newsics.com
ತಮಿಳು ನಟ ಶಿವ ಕಾರ್ತಿಕೇಯನ್ ಹಾಗೂ ನಟಿ ಸಾಯಿ ಪಲ್ಲವಿ ನಟಿಸಿರುವ ಅಮರನ್ ಸಿನಿಮಾ ಪ್ರದರ್ಶನಗೊಳ್ಳುತ್ತಿದ್ದ ಥಿಯೇಟರ್ ಮೇಲೆ ಪೆಟ್ರೋಲ್ ಬಾಂಬ್ ಎಸೆದ ಘಟನೆ ತಮಿಳುನಾಡನ್ನೇ ಬೆಚ್ಚಿ ಬೀಳಿಸಿದೆ.
ಹೌದು,ಎರಡು ವಾರದ ಹಿಂದೆ ಬಿಡುಗಡೆ ಆಗಿ ಸೂಪರ್ ಹಿಟ್ ಎನಿಸಿಕೊಂಡಿರುವ ‘ಅಮರನ್’ ಸಿನಿಮಾದ ಬಗ್ಗೆ ಕೆಲವರು ಅಸಮಾಧಾನವನ್ನೂ ಸಹ ವ್ಯಕ್ತಪಡಿಸಿದ್ದಾರೆ. ‘ಅಮರನ್’ ಸಿನಿಮಾ ಬಿಡುಗಡೆ ಆದ ಮೊದಲಲ್ಲಿ ಜಾತಿಯ ಕಾರಣಕ್ಕೆ ಕೆಲವು ವಿವಾದಾದ್ಮಕ ಹೇಳಿಕೆಗಳು ಕೇಳಿಬಂದವು, ಇತ್ತೀಚೆಗೆ ಸಂಘಟನೆಯೊಂದು ಧರ್ಮದ ಕಾರಣಕ್ಕೆ ಸಿನಿಮಾದ ವಿರುದ್ಧ ಪ್ರತಿಭಟನೆ ವ್ಯಕ್ತಪಡಿಸಿತು. ಇದೀಗ ‘ಅಮರನ್’ ಸಿನಿಮಾ ಪ್ರದರ್ಶನ ಆಗುತ್ತಿದ್ದ ಚಿತ್ರಮಂದಿರದ ಮೇಲೆ ಪೆಟ್ರೋಲ್ ಬಾಂಬ್ ಹಾಕಲಾಗಿದೆ.
ಇನ್ನು ತಮಿಳುನಾಡಿನ ತಿರುನಾಲ್ವೇಲಿಯ ಅಲಂಗಾರ್ ಚಿತ್ರಮಂದಿರದಲ್ಲಿ ‘ಅಮರನ್’ ಸಿನಿಮಾ ಕಳೆದ ಎರಡು ವಾರಗಳಿಂದಲೂ ಪ್ರದರ್ಶನಗೊಳ್ಳುತ್ತಿತ್ತು. ಆದರೆ ಇಂದು ಬೆಳ್ಳಂಬೆಳಿಗ್ಗೆ ಬೈಕ್ ನಲ್ಲಿ ಬಂದ ಇಬ್ಬರು ಮೂರು ಪೆಟ್ರೋಲ್ ಬಾಂಬ್ ಗಳನ್ನು ಚಿತ್ರಮಂದಿರದ ಮೇಲೆ ಎಸೆದು ಸ್ಥಳದಿಂದ ಪರಾರಿಯಾಗಿದ್ದಾರೆ.
ಥಿಯೇಟರ್ ಮೇಲೆ ಪೆಟ್ರೋಲ್ ಬಾಂಬ್ ಎಸೆದ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಅಮರನ್’ ಸಿನಿಮಾ ನಿಜ ಘಟನೆ ಆಧರಿಸಿದ ಸಿನಿಮಾ ಆಗಿದೆ. ಮೇಜರ್ ಮುಕುಂದನ್ ಅವರ ಜೀವನ ಮತ್ತು ಹೋರಾಟದ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಸಿನಿಮಾದಲ್ಲಿ ಮುಕುಂದನ್ ಪಾತ್ರದಲ್ಲಿ ಶಿವಕಾರ್ತಿಕೇಯನ್ ನಟಿಸಿದ್ದಾರೆ. ರೆಬೆಕಾ ವರ್ಗೀಸ್ ಪಾತ್ರದಲ್ಲಿ ಸಾಯಿ ಪಲ್ಲವಿ ನಟಿಸಿದ್ದಾರೆ. ಸಿನಿಮಾ ನಿರ್ಮಾಣ ಮಾಡಿರುವುದು ಕಮಲ್ ಹಾಸನ್. ಸಿನಿಮಾ ಅಕ್ಟೋಬರ್ 31 ರಂದು ಬಿಡುಗಡೆ ಆಗಿತ್ತು.