newsics.com
ಬೆಂಗಳೂರು: ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ್ ಮನೆಯಲ್ಲಿ ಮದುವೆ ತಯಾರಿ ಪ್ರಾರಂಭವಾಗಿವೆ. ಧನಂಜಯ್ ಅವರ ಅರಸೀಕೆರೆಯ ಕಾಳೇನಹಳ್ಳಿಯಲ್ಲಿನ ಮನೆಯಲ್ಲಿ ಇಂದು ಎರಡೂ ಕುಟುಂಬಗಳ ಸಮ್ಮುಖದಲ್ಲಿ ನಿಶ್ಚಿತಾರ್ಥ ನೆರವೇರಿದೆ.

ಅರಸಿಕೆರೆ ತಾಲೂಕು ಕಾಳೇನಹಳ್ಳಿಯಲ್ಲಿರುವ ಧನಂಜಯ್ ನಿವಾಸದಲ್ಲಿ ಸರಳವಾಗಿ ನಿಶ್ಚಿತಾರ್ಥ ಕಾರ್ಯಕ್ರಮ ನಡೆಯಿತು. ಮೈಸೂರಿನಲ್ಲಿ ಫೆ.16 ರಂದು ಮದುವೆ ಕಾರ್ಯಕ್ರಮ ನಡೆಯಲಿದೆ. ಅದ್ದೂರಿಯಾಗಿ ನಡೆಯುವ ಮದುವೆ ಸಮಾರಂಭದಲ್ಲಿ ಸಿನಿಮಾರಂಗ, ರಾಜಕೀಯ ಸೇರಿದಂತೆ ಬೇರೆ ಬೇರೆ ಕ್ಷೇತ್ರದ ಗಣ್ಯರು ಹಾಜರಾಗಲಿದ್ದಾರೆ.
ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ್ ಇತ್ತೀಚೆಗಷ್ಟೇ ತಾವು ಮದುವೆ ಆಗಲಿರುವ ಹುಡುಗಿಯನ್ನು ಪರಿಚಯಿಸಿ, ನಾನು ಧನ್ಯ ಎಂದಿದ್ದರು. ಹೌದು, ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಡಾಲಿ ತನ್ನ ಬಾಳಸಂಗಾತಿಯನ್ನು ಪರಿಚಯಿಸಿದ್ದರು. ಭಾವಿ ಪತ್ನಿ ಗೈನೋಕಾಲಾಜಿಸ್ಟ್ ಆಗಿರುವ ಧನ್ಯತಾ ಜೊತೆಗಿನ ಸುಂದರವಾದ ವಿಡಿಯೋ ಹಂಚಿಕೊಳ್ಳುವ ಮೂಲಕ ಮದುವೆ ಸುದ್ದಿಯನ್ನು ಹಂಚಿಕೊಂಡಿದ್ದರು.