newsics.com
ಅಭಿಮಾನಿಗಳಿಗೆ ನಟ ರಿಷಬ್ ಶೆಟ್ಟಿ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಹೌದು, ಕಾಂತಾರ ಕನ್ನಡ ಚಿತ್ರರಂಗದ ಅತ್ಯಂತ ಯಶಸ್ವಿ ಚಿತ್ರ. ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ಕಾಂತಾರ ಸಿನಿಮಾ ದೊಡ್ಡ ಹಿಟ್ ನೀಡಿತ್ತು. ಈ ಸಕ್ಸಸ್ ಬಳಿ ಕಾಂತಾರ 2 ಸಿನಿಮಾ ಮಾಡಲು ರಿಷಬ್ ಶೆಟ್ಟಿ ಮುಂದಾಗಿರುವ ವಿಚಾರ ಎಲ್ಲರಿಗೂ ಗೊತ್ತೇ ಇದೆ. ಇದೀಗ ಕಾಂತಾರ ಚಾಪ್ಟರ್ 1 ತಂಡದಿಂದ ಹೊಸ ಅಪ್ಡೇಟ್ ಸಿಕ್ಕಿದೆ.

ಕಾಂತಾರ ಚಾಪ್ಟರ್ 1 ಸಿನಿಮಾದ ಮುಂದಿನ ವರ್ಷ ಅಂದರೆ ಅಕ್ಟೋಬರ್ 2 ಗಾಂಧಿ ಜಯಂತಿಯಂದು ರಿಲೀಸ್ ಆಗುತ್ತಿದೆ. ಈ ಬಗ್ಗೆ ಖುದ್ದು ನಟ ರಿಷಬ್ ಶೆಟ್ಟಿ ಅವರೇ ಸೋಷಿಯಲ್ ಮೀಡಿಯಾದಲ್ಲಿ ಸಿಹಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಈಗಾಗಲೇ ಕೇವಲ ಕಾಂತಾರ ಚಾಪ್ಟರ್ 1 ಸಿನಿಮಾದ ಪೋಸ್ಟರ್ ನೋಡಿದ ಅಭಿಮಾನಿಗಳು ಚಿತ್ರದ ಮೇಲೆ ಭಾರೀ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಕಾಂತಾರ ಚಾಪ್ಟರ್ 1 ಸಿನಿಮಾ ಏಳು ಭಾಷೆಯಲ್ಲಿ ಬಿಡುಗಡೆಯಾಗಲಿದೆ. ಕನ್ನಡ ಸೇರಿ, ತಮಿಳು, ತೆಲುಗು, ಹಿಂದಿ, ಮಲಯಾಳಂ, ಬೆಂಗಾಳಿ ಹಾಗೂ ಇಂಗ್ಲೀಷ್ನಲ್ಲೂ ರಿಲೀಸ್ ಮಾಡುವ ನಿರ್ಧಾರವಾಗಿದೆ.
ಪ್ರತಿ ರಾತ್ರಿ ದೈಹಿಕ ಸಂಪರ್ಕ ಬೇಕೇ ಬೇಕಾ? ಜಾಸ್ತಿ ಆದ್ರೆ ಸಮಸ್ಯೆ ತಪ್ಪಿದ್ದಲ್ಲ, ಎಚ್ಚರ!
ಬಿಗ್‌ಬಾಸ್ ಮನೆಗೆ ಎಂಟ್ರಿ ಕೊಡ್ತಿರೋ ವೈಲ್ಡ್ ಕಾರ್ಡ್ ಕಂಟೆಸ್ಟೆಂಟ್ಸ್ ಯಾರು?