newsics.com
ಇಂಫಾಲ್: ಮಣಿಪುರದ ಜಿರಿಬಾಮ್ನಿಂದ ನಾಪತ್ತೆಯಾಗಿದ್ದ 6 ಮಂದಿ ನಾಪತ್ತೆಯಾಗಿದ್ದರು. ಈ ಪೈಕಿ ಓರ್ವ ಮಹಿಳೆ ಮತ್ತು ಇಬ್ಬರು ಮಕ್ಕಳ ಮೃತದೇಹ ಜಿರಿಬಾಮ್ ಜಿಲ್ಲೆಯ ಬೊರೊಬೆಕ್ರಾದಿಂದ 16 ಕಿಮೀ ದೂರದ ನದಿಯಲ್ಲಿ ಪತ್ತೆಯಾಗಿತ್ತು.
ಈ ಬೆನ್ನಲ್ಲೇ ಭಾನುವಾರ (ಇಂದು) ಬೆಳಗ್ಗೆ ರುಂಡವಿಲ್ಲದ ಮತ್ತೊಂದು ಮಹಿಳೆಯ ಮೃತದೇಹ ಅರೆಬೆತ್ತಲೆ ಸ್ಥಿತಿಯಲ್ಲಿ ಪತ್ತೆಯಾಗಿದೆ, ಜೊತೆಗೆ ಉಗ್ರರು ಒತ್ತೆಯಾಳಾಗಿ ಇರಿಸಿದ್ದರು ಎನ್ನಲಾದ 2 ವರ್ಷದ ಮಗುವಿನ ದೇಹವು ಪತ್ತೆಯಾಗಿದೆ ಎಂದು ವರದಿಯಾಗಿದೆ. ಮೃತದೇಹವನ್ನು ಅಸ್ಸಾಂನ ಕ್ಯಾಚರ್ ಜಿಲ್ಲೆಯ ಪೊಲೀಸರು ಪತ್ತೆಹಚ್ಚಿದ್ದಾರೆ. ಆದ್ರೆ ಮೃತದೇಹದ ಗುರುತು ಇನ್ನೂ ಪತ್ತೆಯಾಗಿಲ್ಲ. ಒಟ್ಟಿನಲ್ಲಿ ನಾಪತ್ತೆಯಾದ 6 ಮಂದಿಯಲ್ಲಿ ಇವರೂ ಒಬ್ಬರೆಂದು ಶಂಕಿಸಲಾಗಿದೆ. 4ನೇ ಮೃತದೇಹ ಪತ್ತೆಯಾದ ಬೆನ್ನಲ್ಲೇ ಮಣಿಪುರದಲ್ಲಿ ಉದ್ವಿಗ್ನತೆ ಮತ್ತೆ ಹೆಚ್ಚಾಗಿದೆ.
ಉಗ್ರಗಾಮಿಗಳು ಮೂವರು ಮಹಿಳೆಯರು ಮತ್ತು ಮೂವರು ಮಕ್ಕಳನ್ನು ಹತ್ಯೆ ಮಾಡಿರುವುದಕ್ಕೆ ಆಕ್ರೋಶಗೊಂಡ ಜನರು ಮೂವರು ರಾಜ್ಯ ಸಚಿವರು ಮತ್ತು ಆರು ಶಾಸಕರ ನಿವಾಸಗಳ ಮೇಲೆ ದಾಳಿ ಮಾಡಿದ್ದರು. ಇದಾದ ಬಳಿಕ ರಾಜ್ಯದಲ್ಲಿ ಅನಿರ್ದಿಷ್ಟಾವಧಿ ಕರ್ಫ್ಯೂ ಜಾರಿಗೊಳಿಸಲಾಯಿತು.