newsics.com
ಮೈಸೂರು: ಚಾಮುಂಡಿ ಬೆಟ್ಟದ ನಂದಿಗೆ ಇಂದು ಮಹಾಮಸ್ತಾಭಿಷೇಕ ನೆರವೇರಿದ್ದು, ಚಾಮುಂಡಿ ಬೆಟ್ಟ ಬಳಗ ಚಾರಿಟಬಲ್ ಟ್ರಸ್ಟ್‌ನಿಂದ ಇಂದು 19ನೇ ವರ್ಷದ ಮಹಾಮಸ್ತಾಭಿಷೇಕ ನೆರವೇರಿಸಿದೆ.
ಅಭಿಷೇಕದಲ್ಲಿ ನಂದಿ ವಿಗ್ರಹಕ್ಕೆ 34 ಬಗೆಯ ದ್ರವ್ಯಗಳು ಸೇರಿದಂತೆ 38 ವಿಧಗಳಲ್ಲಿ ಅಭಿಷೇಕ ನೆರವೇರಿಸಲಾಯಿತು.
ಈ ನಂದಿ ವಿಗ್ರಹವು 1659 ರಿಂದ 1673ರವರೆಗೆ ಮೈಸೂರು ಸಂಸ್ಥಾನವನ್ನಾಳಿದ ದೊಡ್ಡ ದೇವರಾಜ ಒಡೆಯರ್ ಕಾಲದಲ್ಲಿ ನಿರ್ಮಾಣವಾಗಿದ್ದು, 350ಕ್ಕೂ ಅಧಿಕ ವರ್ಷಗಳ ಇತಿಹಾಸ ಹೊಂದಿದೆ.
ಚಾಮುಂಡಿ ಬೆಟ್ಟವನ್ನು ಕಾಲ್ನಡಿಗೆಯ ಮೂಲಕ ಹತ್ತುವಾಗ 700 ಮೆಟ್ಟಿಲುಗಳ ಬಳಿ ಏಕಶಿಲಾ ಮೂರ್ತಿಯನ್ನಾಗಿ ಕೆತ್ತನೆ ಮಾಡಲಾಗಿದೆ. ಅಲ್ಲದೇ ಈ ವಿಗ್ರಹವು 16 ಅಡಿ ಎತ್ತರ ಹಾಗೂ 25 ಅಡಿ ಉದ್ದವಿದೆ
https://twitter.com/UdayUdayphoto2/status/1858033668238827997