newsics.com
ಬೆಂಗಳೂರು: ಕರ್ನಾಟಕದ 14 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ರಾಮನಗರ, ಶಿವಮೊಗ್ಗದಲ್ಲಿ ಮಳೆಯಾಗಲಿದೆ.
ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಸಮುದ್ರ ತೀರದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ಚಿಕ್ಕಮಗಳೂರು, ಕೊಡಗು, ಹಾಸನ, ಮಂಡ್ಯ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ನವೆಂಬರ್ 18 ಮತ್ತು 19 ರಂದು ಮಳೆಯಾಗಲಿದೆ.
ಇನ್ನು ದಾವಣಗೆರೆ, ಶಿವಮೊಗ್ಗ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಹಾಗೂ ಹಾವೇರಿ, ಬಳ್ಳಾರಿ, ರಾಮನಗರ, ಚಿತ್ರದುರ್ಗ, ವಿಜಯನಗರ, ಬೆಳಗಾವಿ, ಉತ್ತರ ಕನ್ನಡ, ಧಾರವಾಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನು ನವೆಂಬರ್ 20ರ ಬಳಿಕ ರಾಜ್ಯಾದ್ಯಂತ ಒಣಹವೆ ಮುಂದುವರೆಯಲಿದೆ.