newsics.com
ಬೆಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದು ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಅಪ್ರಾಪ್ತ ಬಾಲಕಿಯನ್ನು ಪಕ್ಕದ ಮನೆಯ ಇಬ್ಬರು ಯುವಕರು ಪುಸಲಾಯಿಸಿ ಚಾಕೊಲೇಟ್ ಕೊಡಿಸುವುದಾಗಿ ಹೇಳಿ ಸಮೀಪದ ದೇವಸ್ಥಾನವೊಂದರ ಬಳಿ ಕರೆದುಕೊಂಡು ಬಾಲಕಿಯ ಬಟ್ಟೆ ಬಿಚ್ಚಿ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ.
ಅಷ್ಟರಲ್ಲೇ ಬಾಲಕಿ ಜೋರಾಗಿ ಕಿರುಚಿಕೊಂಡಿದ್ದು, ಭಯದಿಂದ ಯುವಕರು ಬಾಲಕಿಯನ್ನು ಬಿಟ್ಟು ಎಸ್ಕೇಪ್ ಆಗಿದ್ದಾರೆ. ಬಾಲಕಿ ತಾಯಿ ನೀಡಿದ ದೂರಿನ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಯುವಕರನ್ನು ಶ್ರೀಕಂಠ ಹಾಗೂ ವಿಜಯ್ ಎಂದು ಗುರುತಿಸಲಾಗಿದೆ.