newsics.com
ಬೆಂಗಳೂರು: ನೆಲಮಂಗಲ ತಾಲೂಕಿನ ಗೊಲ್ಲರಹಟ್ಟಿ ಗ್ರಾಮದಲ್ಲಿ ಚಿರತೆ ದಾಳಿಗೆ ಮಹಿಳೆಯೊಬ್ಬರು ಬಲಿಯಾಗಿದ್ದಾರೆ.
ಕರಿಯಮ್ಮ (55) ಮೃತಪಟ್ಟ ಮಹಿಳೆ. ಜಾನುವಾರುಗಳಿಗೆ ಮೇವು ತರಲು ಜಮೀನಿಗೆ ಹೋಗಿದ್ದ ವೇಳೆ ಮಹಿಳೆ ಮೇಲೆ ಚಿರತೆ ದಾಳಿ ನಡೆಸಿದೆ.
ರುಂಡವನ್ನು ಚಿರತೆ ತಿಂದಿದ್ದು, ಕರಿಯಮ್ಮ ಅವರ ಮುಂಡ ಮಾತ್ರ ಪತ್ತೆಯಾಗಿದೆ. ಅರಣ್ಯಾಧಿಕಾರಿಗಳು ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಕರಿಯಮ್ಮ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.