newsics.com
ವಾಷಿಂಗ್ಟನ್: ರಷ್ಯಾ-ಉಕ್ರೇನ್ ಯದ್ಧ ಮತ್ತಷ್ಟು ತೀವ್ರಗೊಳ್ಳುತ್ತಾ ಎಂಬ ಪ್ರಶ್ನೆ ಈಗ ಸೃಷ್ಟಿಯಾಗಿದೆ.
ಇನ್ನೆರಡು ತಿಂಗಳು ಅಧಿಕಾರದಲ್ಲಿರುವ ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರು ರಷ್ಯಾ ವಿರುದ್ಧ ಯುದ್ಧ ಮಾಡುವಂತೆ ಉಕ್ರೇನ್ಗೆ ಅನುಮತಿ ನೀಡಿದ್ದಾರೆ ಎನ್ನಲಾಗುತ್ತಿದೆ.
ಈ ಹಿಂದೆ ಅಮೆರಿಕ ಉಕ್ರೇನ್ಗೆ ದೂರ ಸಾಗಬಲ್ಲ ಕ್ಷಿಪಣಿಯನ್ನು ನೀಡಿತ್ತು. ಆದರೆ ಈ ಕ್ಷಿಪಣಿಯ ಬಳಕೆಗೆ ನಿರ್ಬಂಧ ಹೇರಿತ್ತು. ಎರಡು ತಿಂಗಳು ಅಧಿಕಾರದಲ್ಲಿರುವ ಜೋ ಬೈಡೆನ್ ಸರ್ಕಾರ ಕೊನೆ ಗಳಿಗೆಯಲ್ಲಿ ಈ ನಿರ್ಬಂಧವನ್ನು ತೆಗೆದುಹಾಕಿದೆ.
ಮುಂಬರುವ ದಿನಗಳಲ್ಲಿ ಉಕ್ರೇನ್ ತನ್ನ ಮೊದಲ ದೀರ್ಘ-ಶ್ರೇಣಿಯ ದಾಳಿಯನ್ನು ನಡೆಸಲು ಯೋಜಿಸಿದೆ ಎಂದು ವರದಿಯಾಗಿದೆ. ಉತ್ತರ ಕೊರಿಯಾದ ಪಡೆಗಳನ್ನು ರಷ್ಯಾ ನಿಯೋಜಿಸಿದ ಬೆನ್ನಲ್ಲೇ ಈ ಮಹತ್ವದ ವಿದ್ಯಮಾನ ನಡೆದಿದೆ.
ಮೂಲಗಳ ಪ್ರಕಾರ 190 ಮೈಲುಗಳವರೆಗೆ (306 ಕಿಮೀ) ವ್ಯಾಪ್ತಿಯನ್ನು ಹೊಂದಿರುವ ಎಟಿಎಸಿಎಂಎಸ್ ರಾಕೆಟ್ಗಳನ್ನು ಬಳಸಿಕೊಂಡು ಮೊದಲ ದಾಳಿಯನ್ನು ಉಕ್ರೇನ್ ನಡೆಸುವ ಸಾಧ್ಯತೆಯಿದೆ.