newsics.com
ಬೆಂಗಳೂರು: SSLCಯಲ್ಲಿ ಮೂರು ಬಾರಿ ಫೇಲ್ ಆಗಿದ್ದಕ್ಕೆ ಬಾಲಕನೊಬ್ಬ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿರುವ ಘಟನೆ ಬೆಂಗಳೂರಿನ ತಿಪ್ಪಸಂದ್ರದ ಸರ್ಕಲ್‌ನಲ್ಲಿ ನಡೆದಿದೆ.
ತಿಪ್ಪಸಂದ್ರದ ನಿವಾಸಿಯಾಗಿರುವ ಅಪ್ರಾಪ್ತ ಬಾಲಕ ದೈವ ಭಕ್ತನಾಗಿದ್ದನು. ಭುವನೇಶ್ವರಿ ದೇವಿಯನ್ನು ನಿತ್ಯವೂ ದೇವಿಯನ್ನು ಪೂಜಿಸುತ್ತಿದ್ದನಂತೆ. ಎಸ್‌ಎಸ್‌ಎಲ್‌ಸಿಯಲ್ಲಿ ಆಗಿದ್ದಕ್ಕೆ ದೇವರ ಮೇಲೆ ವಿಗ್ರಹ ವಿರೂಪಗೊಳಿಸಿದ್ದನು. ಪ್ರತಿಮೆ ವಿರೂಪಗೊಳಿಸಿದ ಬಾಲಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಇನ್ನು ಸ್ಥಳಕ್ಕೆ ಬಂದ ಪೊಲೀಸರು ಸಿಸಿಟಿವಿಗಳನ್ನು ಪರಿಶೀಲನೆ ನಡೆಸಿದ್ದು, ಬಳಿಕ ಬಾಲಕನನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಜೀವನ್ ಭೀಮಾನಗರದಲ್ಲಿ BNS ನ ಸೆಕ್ಷನ್ 196 (ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು) ಮತ್ತು 299 (ಧರ್ಮ, ಜನಾಂಗ, ಭಾಷೆ ಮತ್ತು ಜನ್ಮಸ್ಥಳದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.