newsics.com
ನವದೆಹಲಿ: ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಬಿಷ್ಣೋಯ್‌ನನ್ನು ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
ಈ ತಿಂಗಳ ಆರಂಭದಲ್ಲಿ ಅನ್ಮೋಲ್ ವಿರುದ್ಧ ಜಾಮೀನುರಹಿತ ವಾರಂಟ್ ಹೊರಡಿಸಲಾಗಿದೆ ಎಂದು ಗುಪ್ತಚರ ಮೂಲಗಳು ತಿಳಿಸಿವೆ.
ಮುಂಬೈ ಪೊಲೀಸರು ಯುಎಸ್’ನಿಂದ ಅನ್ಮೋಲ್ ವಶಕ್ಕೆ ತೆಗೆದುಕೊಳ್ಳುವ ಪ್ರಕ್ರಿಯೆಯನ್ನು ಆರಂಭಿಸಿದ್ದಾರೆ.