newsics.com
ತಮಿಳುನಾಡು: ಹಾಡಹಗಲೇ ಕೋರ್ಟ್ ಆವರಣದಲ್ಲಿಯೇ ವಕೀಲರೊಬ್ಬರನ್ನು ಕೊಲೆ ಮಾಡಿರುವ ಘಟನೆ ತಮಿಳುನಾಡಿನ ಹೊಸೂರಿನಲ್ಲಿ ನಡೆದಿದೆ.
ಕಣ್ಣನ್(30) ಮೃತ ವಕೀಲ ಎಂದು ತಿಳಿದುಬಂದಿದೆ. ಕೋರ್ಟ್ ನ ಆವರಣದಲ್ಲೇ ವಕೀಲನ ಮೇಲೆ ಕೊಲೆ ಮಚ್ಚಿನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದೆ. ರಕ್ತದ ಮಡುವಿನಲ್ಲಿ ಒದ್ದಾಡುತ್ತಿದ್ದ ವಕೀಲನನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಯಿತು. ಆದರೆ ಅಷ್ಟರಲ್ಲಾಗಲೇ ವಕೀಲ ಕಣ್ಣನ್ ಸಾವನ್ನಪ್ಪಿದ್ದಾರೆ. ಮಚ್ಚಿನಿಂದ ಹಲ್ಲೆ ಮಾಡಿದ ಬಳಿಕ ಆರೋಪಿ ಆನಂದ್ ಕೋರ್ಟ್ ಗೆ ಶರಣಾಗಿದ್ದಾನೆ. ಘಟನಾ ಸ್ಥಳಕ್ಕೆ ಹೊಸೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಜಮೀನು ವಿವಾದ ಹಿನ್ನೆಲೆಯಲ್ಲಿ ವಕೀಲನ ಮೇಲೆ ಹಲ್ಲೆ ನಡೆದುಇರುವ ಶಂಕೆ ವ್ಯಕ್ತವಾಗಿದೆ.